ಜಮ್ಮುಕಾಶ್ಮೀರದಲ್ಲಿ ಮತ್ತೆ ಸದ್ದುಮಾಡಿದ ಭಾರತೀಯ ಯೋಧರ ರೈಪ಼ಲ್ ಗಳು! ; ಮೂವರು ಉಗ್ರರು ಖಲಾಸ್!.ಶ್ರೀನಗರ: ಮೂವರು ಉಗ್ರಗಾಮಿಗಳು ಬುಧವಾರ ದಕ್ಷಿಣ ಕಾಶ್ಮೀರದಲ್ಲಿ ಸೇನೆ ನಡೆಸಿದ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯಲ್ಲಿ ಹತರಾಗಿದ್ದಾರೆ. ಕಾರ್ಯಾಚರಣೆ ವೇಳೆ ಒಬ್ಬ ನಾಗರಿಕನಿಗೂ ಗಾಯಗಳಾಗಿವೆ. ಉಗ್ರರು ಅವಿತಿರುವ ಬಗ್ಗೆ ಗುಪ್ತಚರ ದಳ ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಮುಂಜಾನೆ ಸೇನೆಯ 55ಆರ್, ಸಿಆರ್‌ಪಿಎಫ್ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಪುಲ್ವಾಮಾದ ಟಿಕೆನ್ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು.


ಈ ನಡುವೆ ಉಗ್ರರು ಉತ್ತರ ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಠ ಆರು ಮಂದಿ ನಾಗರಿಕರು ಗಾಯಗೊಂಡಿದ್ದಾರೆ. ಸಶಸ್ತ್ರ ಸೀಮಾ ಬಲ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನದತ್ತ ಉಗ್ರರು ಗ್ರೆನೇಡ್ ಎಸೆದಿದ್ದು, ಗುರಿ ತಪ್ಪಿ ಸಿಂಗಾಪುರ ಮುಖ್ಯ ಮಾರುಕಟ್ಟೆ ಪ್ರದೇಶದಲ್ಲಿ ರಸ್ತೆಬದಿ ಸ್ಫೋಟಗೊಂಡಿತು ಎಂದು ಅಧಿಕೃತ ಮೂಲಗಳು ಹೇಳಿವೆ.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/