ಕಾಶ್ಮೀರದ ಬಗ್ಗೆ ಮತ್ತೆ ಕ್ಯಾತೆ ತೆಗೆದ ಪಾಕಿಸ್ತಾನ ಈ ಬಾರಿ ಮಾಡಿದ್ದು ಮಾತ್ರ ಅಸಹನೀಯ!ನವದೆಹಲಿ: ಭಾರತ ಹೇಳಿದ್ದೆಲ್ಲಕ್ಕೂ ತನ್ನ ಒಪ್ಪಿಗೆ ಇದೆ ಎಂಬಂತೆ ತಲೆಯಾಡಿಸಿ ಇದೀಗ ಪಾಕಿಸ್ತಾನ ಕಾಶ್ಮೀರದ ವಿಷಯ ಕೆದಕಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಇಮ್ರಾನ್ ಖಾನ್ ಅವರು, ಗಡಿಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಕದನ ವಿರಾಮ ನಿಯಮಗಳ ಎಲ್ಲ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಉಭಯ ರಾಷ್ಟ್ರಗಳು ಒಪ್ಪಿಗೆ ಸೂಚಿಸಿರುವುದನ್ನು ನಾನು ಸ್ವಾಗತಿಸುತ್ತೇನೆ.

ಮುಂದಿನ ಪ್ರಗತಿಗೆ ಅನುವು ಮಾಡಿಕೊಡುವ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಭಾರತದ ಕೈಯಲ್ಲಿದೆ ಎಂದು ಹೇಳಿದ್ದಾರೆ. ಕಾಶ್ಮೀರ ಜನರ ದೀರ್ಘಕಾಲದ ಬೇಡಿಕೆ ಹಾಗೂ ಹಕ್ಕಿನ ಬಗ್ಗೆ ಭಾರತ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇಮ್ರಾನ್ ಹೇಳಿದ್ದಾರೆ.

ಕಾಶ್ಮೀರದ ಕುರಿತು ಮಾತನಾಡಿದ ಇಮ್ರಾನ್‌ಖಾನ್
ಕಾಶ್ಮೀರದ ಕುರಿತು ಮಾತು
ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಕದನ ವಿರಾಮ ನಿಯಮಗಳ ಎಲ್ಲ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಭಾರತ ಹಾಗೂ ಪಾಕಿಸ್ತಾನ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಪಾಕಿಸ್ತಾನದ ಅಧ್ಯಕ್ಷ ಇಮ್ರಾನ್ ಖಾನ್ ಅವರು ಕಾಶ್ಮೀರ ವಿವಾದ ಕುರಿತು ಮಾತನಾಡಿದ್ದಾರೆ.

ವಿಶ್ವಸಂಸ್ಥೆ ಕುರಿತು ಉಲ್ಲೇಖ
ಭದ್ರತಾ ಮಂಡಳಿಯ ಕುರಿತು ಉಲ್ಲೇಖ
ಇದೇ ವೇಳೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಉಲ್ಲೇಖಿಸಿರುವ ಅವರು, ಕಾಶ್ಮೀರಿ ಜನರ ಸ್ವ-ನಿರ್ಣಯದ ಹಕ್ಕು ಮತ್ತು ದೀರ್ಘಾವಧಿಯ ಬೇಡಿಕೆಯನ್ನು ಈಡೇರಿಸಲು ಭಾರತವು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಟ್ವೀಟ್ ಮಾಡಿದ್ದಾರೆ.

ಒಪ್ಪಂದ ಪಾಲನೆ
ಕದನ ವಿರಾಮ ಒಪ್ಪಂದ ಪಾಲನೆ
ಗಡಿಭಾಗದಲ್ಲಿನ ಉದ್ವಿಗ್ನತೆ ಕಡಿಮೆ ಮಾಡುವ ಮಹತ್ವದ ಕ್ರಮದಲ್ಲಿ ಭಾರತ ಮತ್ತು ಪಾಕಿಸ್ತಾನದ ಸೇನೆಯ ಅಧಿಕಾರಿಗಳು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕದನ ವಿರಾಮಕ್ಕೆ ಸಂಬಂಧಿಸಿದ ಎಲ್ಲಾ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಒಪ್ಪಿಕೊಂಡಿದ್ದು, ಉಭಯ ರಾಷ್ಟ್ರಗಳ ಈ ನಿರ್ಧಾರವನ್ನು ವಿಶ್ವಸಂಸ್ಥೆ, ಅಮೆರಿಕಾ ಸೇರಿದಂತೆ ಹಲವು ರಾಷ್ಟ್ರಗಳು ಸ್ವಾಗತಿಸಿವೆ.

ಅಪಾಯಕಾರಿ ನೀತಿ ಎಂದ ಇಮ್ರಾನ್
ಭಾರತೀಯ ಸೇನೆಯದ್ದು ಅಪಾಯಕಾರಿ ನೀತಿ ಎಂದು ಪಾಕ್
ವಶಪಡಿಸಿಕೊಂಡ ಭಾರತೀಯ ಪೈಲಟ್ ಅನ್ನು ಮರಳಿ ಕಳುಹಿಸುವ ಮೂಲಕ ಭಾರತೀಯ ಸೇನೆಯ ಅಪಾಯಕಾರಿ ನೀತಿಯ ವಿರುದ್ಧ ನಾವು ಪಾಕಿಸ್ತಾನದ ಜವಾಬ್ದಾರಿಯುತ ನಡವಳಿಕೆಯನ್ನು ಇಡೀ ವಿಶ್ವಕ್ಕೆ ಪಾಕಿಸ್ತಾನ ತೋರಿಸಿದೆ. ಪಾಕಿಸ್ತಾನ ಎಂದಿಗೂ ಶಾಂತಿಯ ಪರವಾಗಿದ್ದು, ಮಾತುಕತೆ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಸಿದ್ಧವಿದೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಉಲ್ಲೇಖಿಸಿದ್ದಾರೆ.