ದೆಹಲಿಯ ಗಡಿಯಲ್ಲಿ ಇಂಟರ್ನೆಟ್ ಕಡಿತ ವಿಸ್ತರಣೆಯ ಕುರಿತು ಸ್ಪಷ್ಟನೆ:ನವದೆಹಲಿ: ಫೆಬ್ರವರಿ 2ರ ರಾತ್ರಿಯವರೆಗೆ ದೆಹಲಿಯ ಗಡಿಯಲ್ಲಿ ಇಂಟರ್ನೆಟ್ ಕಡಿತಗೊಳಿಸಿರುವ ಆದೇಶ ವಿಸ್ತರಿಸಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಜನವರಿ 29 ರಂದು ರಾತ್ರಿ 11 ರಿಂದ ಜನವರಿ 31 ರವರೆಗೆ ರಾತ್ರಿ 11 ಗಂಟೆಯವರೆಗೆ ರೈತರ ಪ್ರತಿಭಟನೆ ನಡೆಯುತ್ತಿರುವ ಸಿಂಘು, ಟಿಕ್ರಿ ಮತ್ತು ಗಾಜಿಪುರ ಗಡಿಯಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿತ್ತು. ಬಳಿಕ ಅದನ್ನು ಫೆ.2ರ ವರೆಗೆ ವಿಸ್ತರಿಸಿತ್ತು.

ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ತಪ್ಪಿಸಲು ಅಥವಾ ಸಾರ್ವಜನಿಕ ಸುರಕ್ಷತೆ ಕಾಪಾಡಲು ಟೆಲಿಕಾಂ ಸೇವೆಗಳ ತಾತ್ಕಾಲಿಕ ಅಮಾನತು ನಿಯಮಗಳು 2017ರ ಅಡಿಯಲ್ಲಿ ಇಂಟರ್ ನೆಟ್ ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದೆಹಲಿಯ ಗಡಿಯಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸುವ ಆದೇಶ ಮತ್ತೆ ವಿಸ್ತರಿಸಿಲ್ಲ ಎಂದು ಸಚಿವಾಲಯದ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ :  ದೀದಿ ಸರ್ಕಾರಕ್ಕೆ ಸುಪ್ರೀಂ ಚಾಟಿ