ಬಿಗ್ ಬ್ರೇಕಿಂಗ್ ; ದೀದೀಗೆ ನಡುಕ ಹುಟ್ಟಿಸಿದ ಪ್ರಸಿದ್ಧ ನಟಿಯ ನಡೆ! ರಾಜಕೀಯ ಸಂಚಲನಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೊಸ್ತಿಲಿನಲ್ಲೇ ಬಂಗಾಳದ ಖ್ಯಾತ ನಟಿ ಶ್ರಬಂತಿ ಚಟರ್ಜಿ ಅವರು ಸೋಮವಾರ ಭಾರತೀಯ ಜನತಾ ಪಾರ್ಟಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಬಂಗಾಳದ ಖ್ಯಾತ ನಟಿ ಶ್ರಬಂತಿ ಚಟರ್ಜಿ ಅವರನ್ನು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಅವರು ಪಕ್ಷಕ್ಕೆ ಬರ ಮಾಡಿಕೊಂಡರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಸಹ ಉಪಸ್ಥಿತರಿದ್ದರು.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಪಶ್ಚಿಮ ಬಂಗಾಳದಲ್ಲಿ ಈಗ ಸಾಕಷ್ಟು ಕಡೆಗಳಿಂದ ಜನರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಇಂದು ಪಕ್ಷಕ್ಕೆ ಸೇರ್ಪಡೆಯಾದ ನಟಿ ಶ್ರಬಂತಿ ಚಟರ್ಜಿಯವರನ್ನು ನಾನು ಪಕ್ಷಕ್ಕೆ ಆಹ್ವಾನಿಸುತ್ತೇವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಕಳೆದ ಫೆಬ್ರವರಿ.26ರಂದು ನಾಲ್ಕು ರಾಜ್ಯ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಧಾನಸಭಾ ಚುನಾವಣೆ ನಡೆಸುವುದಕ್ಕೆ ಕೇಂದ್ರ ಚುನಾವಣಾ ಆಯೋಗವು ದಿನಾಂಕ ಘೋಷಿಸಿತು. ಈ ಪೈಕಿ ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಿಗೆ ಎಂಟು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಮಾರ್ಚ್.27ರಿಂದ ಆರಂಭವಾಗಲಿರುವ ಚುನಾವಣೆಯು ಏಪ್ರಿಲ್.29ರಂದು ಮುಕ್ತಾಯಗೊಳ್ಳಲಿದ್ದು, ಮೇ.02ರಂದು ಫಲಿತಾಂಶ ಹೊರ ಬೀಳಲಿದೆ.