ಬ್ರೇಕಿಂಗ್ ನ್ಯೂಸ್ : ಮಧ್ಯಪ್ರದೇಶದ ಬಿಜೆಪಿ ಸಂಸದ ನಿಧನ!ಬಿಜೆಪಿಯ ಲೋಕಸಭಾ ಸದಸ್ಯ ನಂದ ಕುಮಾರ್‌ ಸಿಂಗ್‌ ಚೌಹಾಣ್‌ ಸೋಮವಾರ ರಾತ್ರಿ ನಿಧನರಾದರು. ಕೊರೊನಾ ವೈರಸ್‌ ಸೋಂಕಿಗೆ ಒಳಗಾಗಿದ್ದ ಅವರು ದೆಹಲಿಯ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ನಂದಕುಮಾರ್ (68)‌ ಮಧ್ಯ ಪ್ರದೇಶದ ಖಾಂಡವಾ ಕ್ಷೇತ್ರದ ಸಂಸದರಾಗಿದ್ದರು.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


2009–14ರಲ್ಲಿ ಕಾಂಗ್ರೆಸ್‌ನ ಅರುಣ್‌ ಸುಭಾಷ್ ಚಂದ್ರ ಯಾದವ್‌ ಎದುರು ಸೋಲು ಕಂಡಿದ್ದು ಹೊರತು ಪಡಿಸಿ, ಖಾಂಡವಾ ಲೋಕಸಭಾ ಕ್ಷೇತ್ರದಿಂದ 1996ರಿಂದ ಉಳಿದ ಎಲ್ಲ ಚುನಾವಣೆಗಳಲ್ಲಿಯೂ ಸ್ಪರ್ಧಿಸಿ ಆಯ್ಕೆಯಾಗಿದ್ದರು. 2018ರ ಏಪ್ರಿಲ್‌ 18ರ ವರೆಗೂ ಮಧ್ಯ ಪ್ರದೇಶ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು.