ಚೀನಾಗೆ ಖಡಕ್ ವಾರ್ನಿಂಗ್ ಕೊಟ್ಟ ಭಾರತ, ಗಡಿಯಲ್ಲಿ ಬಾರೀ ಬದಲಾವಣೆ!ನವದೆಹಲಿ: ಲಡಾಕ್ ನಲ್ಲಿ ಚೀನಾದೊಂದಿಗೆ ಕಳೆದ ಐದೂವರೆ ತಿಂಗಳಿನಿಂದ ಸತತ ಸೇನೆಯ ಸಂಘರ್ಷದ ಬಗ್ಗೆ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರತಿ ಇಂಚು ಭೂಮಿ ಬಗ್ಗೆ ಕಾಳಜಿ ಹೊಂದಿದ್ದು ಅದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಭಾರತದ ಆಂತರಿಕ ವಿಚಾರದಲ್ಲಿ ಚೀನಾ ಮೂಗು ತೂರಿಸುವ ಅವಶ್ಯಕತೆ ಇಲ್ಲ. ಜಮ್ಮು , ಕಾಶ್ಮೀರ ಹಾಗೂ ಲಡಾಖ್ ಪ್ರದೇಶಗಳು ಈ ಹಿಂದೆಯೂ ಭಾರತಕ್ಕೆ ಸೇರಿದ ಪ್ರದೇಶವಾಗಿವೆ. ಮುಂದೆಯೂ ಭಾರತಕ್ಕೇ ಸೇರಿದ ಪ್ರದೇಶಗಳಾಗಿ ಇರಲಿವೆ ಅಂತಾ ಎಚ್ಚರಿಕೆ ನೀಡಿವೆ. ಈ ವಿಚಾರವಾಗಿ ಮಾತನಾಡಿದ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಕಶ್ಯಪ್, ಅರುಣಾಚಲ ಪ್ರದೇಶ ವಿಚಾರವಾಗಿಯೂ ಸಾಕಷ್ಟು ಬಾರಿ ಚೀನಾಗೆ ಸ್ಪಷ್ಟನೆ ನೀಡಿದ್ದೇವೆ. ಅರುಣಾಚಲ ಪ್ರದೇಶ ಭಾರತಕ್ಕೆ ಭಾಗವಾಗಿದೆ. ಹೀಗಾಗಿ ಚೀನಾ ಈ ವಿಚಾರಗಳಲ್ಲಿ ಮಧ್ಯ ಪ್ರವೇಶಿಸುವ ಅಗತ್ಯತೆ ನಮಗಿಲ್ಲ ಅಂತಾ ವಾರ್ನಿಂಗ್ ನೀಡಿದ್ದಾರೆ.

ಲಡಾಕ್ ನಲ್ಲಿ ಚೀನಾದೊಂದಿಗಿನ ಸೇನೆ ನಿಲುಗಡೆ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಮಿಲಿಟರಿ ಮತ್ತು ರಾಜತಾಂತ್ರಿಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಮ್ಮ ಇಂಚಿಂಚು ಭೂಮಿ ಬಗ್ಗೆ ಕೂಡ ನಾವು ಜಾಗ್ರತರಾಗಿದ್ದೇವೆ. ಅದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ದೇಶದ ಸ್ವಾಯತ್ತತೆ ಮತ್ತು ಗಡಿಯನ್ನು ರಕ್ಷಿಸಲು ನಮ್ಮ ಸೇನಾಪಡೆ ಮತ್ತು ನಾಯಕತ್ವ ಸಮರ್ಥವಾಗಿದೆ ಎಂದು ಇಂಗ್ಲಿಷ್ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದರು.

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800