ವಾರದ ಹಿಂದಷ್ಟೇ ವೈರಲ್ ಆಗಿದ್ದ ರೈತನಿಗೆ ಆನಂದ್ ಮಹೀಂದ್ರ ಕೊಟ್ರು ಬಂಪರ್ ಗಿಫ್ಟ್, ಏನದು ಗೊತ್ತಾ?ರೈತನ ಕಥೆಯನ್ನು ಕೇಳಿರುವ 65 ವರ್ಷದ ಬಿಲಿಯನೇರ್ ಉದ್ಯಮಿ, ಅವರು ನಿರ್ಮಿಸಿದ ಕಾಲುವೆ ತಾಜ್ ಅಥವಾ ಪಿರಮಿಡ್ ಗಳಂತೆಯೇ ಒಂದು ಸ್ಮಾರಕವಾಗಿದೆ ಎಂದು ನಾನು ಭಾವಿಸುತ್ತೇನೆ. ಮಹೀಂದ್ರಾ ಕಂಪನಿಯ ಮೂಲಕ ಅವರಿಗೆ ಟ್ರ್ಯಾಕ್ಟರ್ ಕೊಡುತ್ತಿರುವುದು ನನ್ನ ಸೌಭಾಗ್ಯ ಎಂದು ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಆ ವ್ಯಕ್ತಿಯನ್ನು ನಮ್ಮ ತಂಡ ಹೇಗೆ ಸಂಪರ್ಕಿಸಬಹುದು ಎಂದು ಪ್ರಶ್ನಿಸಿದ್ದರು. ಸದ್ಯ ಕಂಪನಿ ರೈತನನ್ನು ಸಂಪರ್ಕಿಸಿದ್ದು, ಸಂಸ್ಥೆಯ ಪ್ರಾದೇಶಿಕ ವ್ಯಾಪಾರಿ ಸಿದ್ಧಿನಾಥ್ ವಿಶ್ವಕರ್ಮ, ಲಾಂಗಿ ಭುಯಾನ್‍ಗೆ ಕಳೆದ ಶನಿವಾರ ಮಹೀಂದ್ರಾ ಟ್ರ್ಯಾಕ್ಟರನ್ನು ಹಸ್ತಾಂತರಿಸಿದ್ದಾರೆ. ಮಳೆ ನೀರನ್ನು ಶೇಖರಣೆ ಮಾಡಲು ಲೌಂಗಿ 3 ಕಿ.ಮೀ ಉದ್ದದ ಕಾಲುವೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ ಅವರು ಆಧುನಿಕ ಭಗೀರಥ ಎಂದೆನಿಸಿಕೊಂಡಿದ್ದರು.

ಇವರು ಬರೋಬ್ಬರಿ 30 ವರ್ಷಗಳಿಂದ ತನ್ನ ಗ್ರಾಮದ ಜಮೀನಿಗಳಿಗೆ ನೆರವಾಗಲು ಕಾಲುವೆ ನಿರ್ಮಿಸಿದ್ದಾರೆ. ಗಯಾದ ಲಥುವಾ ಏರಿಯಾದಲ್ಲಿ ಬರುವ ಕೊಥಿಲವಾ ಗ್ರಾಮ ನಿವಾಸಿಯಾಗಿರುವ ಲೌಂಗಿ, ಗ್ರಾಮದ ಜನ ನೀರಿನ ಅಭಾವ ಎದುರಿಸುತ್ತಿದ್ದರು. ಇದನ್ನು ತಪ್ಪಿಸಲೆಂದು ಸಮೀಪದ ಬೆಟ್ಟದ ಇಳಿಜಾರಿಗೆ ಅನುಗುಣವಾಗಿ ಕಾಲುವೆ ಮಾಡಿ ಮಳೆ ನೀರು ಹರಿದು ಕೆರೆಗೆ ಸೇರುವಂತೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದ ಲೌಂಗಿ, ಈ ಕಾಲುವೆಯನ್ನು ಅಗೆಯಲು ನನಗೆ ಬರೋಬ್ಬರಿ 30 ವರ್ಷಗಳು ಬೇಕಾಯಿತು. ಈ ಕಾಲುವೆ ನೀರು ಹಳ್ಳಿಯ ಕೊಳಕ್ಕೆ ಸೇರಿ ಅಲ್ಲಿ ಶೇಖರಣೆಯಾಗುತ್ತದೆ ಎಂದು ತಿಳಿಸಿದ್ದರು. ಕಳೆದ 30 ವರ್ಷಗಳಿಂದ ನಾನು ನನ್ನ ದನಗಳನ್ನು ಮೇಯಲು ಕರೆದುಕೊಂಡು ಹೋಗುತ್ತಿದ್ದೆ. ಹೀಗೆ ಹೋದವನು ದಿನಾ ಸ್ವಲ್ಪ ಸ್ವಲ್ಪ ಕಾಲುವೆಯನ್ನು ಅಗೆಯುತ್ತಿದ್ದೆ. ಈ ವೇಳೆ ನನಗೆ ಯಾರೂ ಸಹಾಯ ಮಾಡಲಿಲ್ಲ. ಗ್ರಾಮದ ಜನ ತಮ್ಮ ಜೀವನೋಪಾಯಕ್ಕಾಗಿ ಹಳ್ಳಿ ತೊರೆದು ನಗರದ ಕಡೆ ಮುಖ ಮಾಡುತ್ತಿದ್ದಾರೆ.

ಆದರೆ ನಾನು ಆ ರೀತಿ ಮಾಡದೇ ಹಳ್ಳಿಯಲ್ಲೇ ಉಳಿದುಕೊಳ್ಳಲು ನಿರ್ಧರಿಸಿರುವುದಾಗಿ ಲೌಂಗಿ ಹೇಳಿದ್ದರು. ಇತ್ತೀಚೆಗಷ್ಟೇ ಬಜಾಜ್ ಸ್ಕೂಟರಿನಲ್ಲಿ ತನ್ನ ತಾಯಿಯನ್ನು ದೇಶ ಸುತ್ತಿಸಿದ ಮೈಸೂರಿನ ವ್ಯಕ್ತಿಗೆ ಮಹೀಂದ್ರಾ ಗ್ರೂಪ್ ಮುಖ್ಯಸ್ಥ ಆನಂದ್ ಮಹೀಂದ್ರಾ ಕಾರನ್ನು ಬಹುಮಾನವಾಗಿ ನೀಡಿದ್ದರು. ಈ ಬೆನ್ನಲ್ಲೇ ಇದೀಗ ಬಿಹಾರದ ರೈತನಿಗೆ ಗೌರವಾರ್ಥವಾಗಿ ಗಿಫ್ಟ್ ನೀಡಿದ್ದಾರೆ.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀ ಕರಣ ಹಾಗೂ ಪುರುಷ ವ ಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. 9740202800