ಭಾರತಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ!! ಕಾರಣ ಇಲ್ಲಿದೆ ನೋಡಿನವದೆಹಲಿ, ಮೇ 14: ಭಾರತದಲ್ಲಿ ಪ್ರತಿನಿತ್ಯ 4 ಲಕ್ಷದ ಗಡಿ ದಾಟುತ್ತಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 3.43ಕ್ಕೆ ಇಳಿಮುಖವಾಗಿದೆ. ಹಾಗೆಂದ ಮಾತ್ರಕ್ಕೆ ಕೊವಿಡ್-19 ಪ್ರಭಾವ ಕಡಿಮೆಯಾಗಿದೆ ಎಂದು ಭಾವಿಸುವಂತಿಲ್ಲ. ಏಕೆಂದರೆ ಸೋಂಕು ತಪಾಸಣೆ ಪ್ರಮಾಣದಲ್ಲಿ ಇಳಿಕೆಯಾಗಿರುವುದೇ ಈ ಅಂಕಿ-ಸಂಖ್ಯೆಗಳ ಹಿಂದಿನ ಮರ್ಮವಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,43,144 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 4,000 ಮಂದಿ ಕೊವಿಡ್-19 ಸೋಂಕಿತರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದು, 3,44,776 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು2,40,46,809 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,00,79,599 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 2,62,317 ಜನರು ಬಲಿಯಾಗಿದ್ದಾರೆ. ಇದರ ಹೊರತಾಗಿ 37,04,893 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 18,75,515 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 31,13,24,100 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಇದನ್ನೂ ಓದಿ :  ರಾಮ್ ಪ್ರಸಾದ ಅವರ ಈ ಘಟನೆ ಮೈ ಜುಮ್ಮ ಎನಿಸುತ್ತದೆ. ನೋಡಿ