ಭಾರತದ ಕೋವಾಕ್ಸಿನ್ ಎಷ್ಟು ಪರಿಣಾಮಕಾರಿ ಅನ್ನೋದಕ್ಕೆ ಇದೇ ಉದಾಹರಣೆ!ನವದೆಹಲಿ: ಭಾರತದಲ್ಲಿಯೇ ಅಭಿವೃದ್ಧಿಗೊಂಡಿರುವ ಕೋವ್ಯಾಕ್ಸಿನ್ ಕೊರೊನಾ ಲಸಿಕೆ ಶೇ.81ರಷ್ಟು ಪರಿಣಾಮಕಾರಿ ಎಂದು ಭಾರತ್ ಬಯೋಟೆಕ್ ತಿಳಿಸಿದೆ.

ಕೊನೆಯ ಹಂತದ ಕ್ಲಿನಿಕಲ್ ಟ್ರಯಲ್ ನಡೆಯುವುದಕ್ಕೂ ಮುನ್ನವೇ ಜನವರಿಯಲ್ಲಿ ಸರ್ಕಾರ ‘ಕೋವ್ಯಾಕ್ಸಿನ್‌’ ತುರ್ತು ಬಳಕೆಗೆ ಅನುಮತಿ ನೀಡಿತ್ತು.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಮೊದಲ ದೇಶಿ ಕೋವಿಡ್-19 ಲಸಿಕೆ ‘ಕೋವ್ಯಾಕ್ಸಿನ್‌’ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್‌ನ ಮಧ್ಯಂತರ ವಿಶ್ಲೇಷಣೆಯಲ್ಲಿ ಶೇ. 81 ರಷ್ಟು ಪರಿಣಾಮಕಾರಿತ್ವ ತೋರಿದೆ ಎಂದು ಭಾರತ್ ಬಯೋಟೆಕ್ ಕಂಪನಿ ತಿಳಿಸಿದೆ.

ದೇಶದಾದ್ಯಂತ ಕೋವಿಡ್ ವಿರುದ್ಧ ಲಸಿಕೆ ನೀಡಿಕೆ ಅಭಿಯಾನ ಪ್ರಗತಿಯಲ್ಲಿದೆ. ಸೋಮವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಕೂಡ ‘ಕೋವ್ಯಾಕ್ಸಿನ್‌’ ಲಸಿಕೆ ಹಾಕಿಸಿಕೊಂಡಿದ್ದರು.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದಲ್ಲಿ ನಡೆಸಲಾದ ಕ್ಲಿನಿಕಲ್ ಟ್ರಯಲ್‌ನಲ್ಲಿ 25,800 ಮಂದಿ ಭಾಗವಹಿಸಿದ್ದರು.

ಈ ಪೈಕಿ 43 ಮಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಇದರ ಆಧಾರದಲ್ಲಿ ಮಧ್ಯಂತರ ವಿಶ್ಲೇಷಣೆ ಸಿದ್ಧಪಡಿಸಲಾಗಿದೆ. ಆದರೆ, ಕೋವಿಡ್ ದೃಢಪಟ್ಟ 43 ಮಂದಿಯ ಪೈಕಿ 36 ಜನರನ್ನು ಪ್ರಯೋಗಗಳಿಗಷ್ಟೇ ಬಳಸಿಕೊಳ್ಳಲಾಗಿತ್ತು.

7 ಮಂದಿ ಮಾತ್ರ ಲಸಿಕೆ ಪಡೆದಿದ್ದರು. ಇದರ ಆಧಾರದಲ್ಲಿ ಲಸಿಕೆ ಶೇ 80.6ರಷ್ಟು ಪರಿಣಾಮಕಾರಿ ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಕಂಪನಿ ತಿಳಿಸಿದೆ. ಭಾರತದಲ್ಲಿ ಈಗಾಗಲೇ ಎಲ್ಲರಿಗೂ ಕೋವಿಶೀಲ್ಡ್,ಕೋವ್ಯಾಕ್ಸಿನ್ ಕೊರೊನಾ ಲಸಿಕೆಯನ್ನು ನೀಡಲಾಗುತ್ತಿದೆ.