ಬಿಜೆಪಿ ಸಂಸದರ ಜೊತೆ ನರೇಂದ್ರ ಮೋದಿಯನ್ನೂ ಜಾಡಿಸಿದ ದಿನೇಶ್ ಗುಂಡೂರಾವ್!ಬೆಂಗಳೂರು: ರಾಜ್ಯದ 25 ಬಿಜೆಪಿ ಸಂಸದರು ತಮ್ಮ ಸ್ವಾಭಿಮಾನವನ್ನು ಚಿಪ್ಪಿನೊಳಗೆ ಎಳೆದುಕೊಂಡ ಮೃದ್ವಂಗಿಗಳಂತೆ ಜಡವಾಗಿದ್ದಾರೆ ಎಂದು ಟೀಕಿಸಿರುವ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕದಲ್ಲಿ ರಣಭೀಕರ ಮಳೆಯಾಗಿದ್ದು, ಉತ್ತರ ಕರ್ನಾಟಕದಲ್ಲಿ ಜನರ ಬದುಕು ಮೂರಾಬಟ್ಟೆಯಾಗಿದೆ. ಈ ಸಂದರ್ಭದಲ್ಲಿ ಸರಣಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸರ್ಕಾರ ತೆರೆದಿರುವ ಪರಿಹಾರ ಕೇಂದ್ರಗಳು ನಿರಾಶ್ರಿತರ ಪಾಲಿಗೆ ನರಕ ಕೇಂದ್ರಗಳಾಗಿವೆ. ಸರಿಯಾದ ವ್ಯವಸ್ಥೆಯಿಲ್ಲದೆ, ಊಟ ಉಪಚಾರವಿಲ್ಲದೆ ನೆರೆ ಸಂತ್ರಸ್ತರು ಪರದಾಡುತ್ತಿರುವ ಬಗ್ಗೆ ವರದಿ ಬರುತ್ತಿದೆ. ಇಷ್ಟಾದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ಕರ್ನಾಟಕದ ನೆರವಿಗೆ ಬಂದಿಲ್ಲ ಎಂದು ಜಾಡಿಸಿದ್ದಾರೆ.

ನೆರೆಯ ಆಂಧ್ರ ಮತ್ತು ತೆಲಂಗಾಣದಲ್ಲಿ ಸುರಿದ ಮಳೆ ಮಾತ್ರ ಪ್ರಧಾನಿ ಅವರಿಗೆ ಕಾಣಿಸಿದೆ. ನಮ್ಮ ರಾಜ್ಯದ ಮಳೆ ಪ್ರವಾಹದ ಬಗ್ಗೆ ಪರಿಹಾರವಿರಲಿ, ಸೌಜನ್ಯಕ್ಕೂ ಸಾಂತ್ವನ ಹೇಳುವ ಮನಸ್ಸು ಕೂಡ ಪ್ರಧಾನಿಯವರಿಗಿಲ್ಲ ಎಂದು ಟೀಕಿಸಿದ್ದಾರೆ. ರಾಜ್ಯದಲ್ಲಿ 25 ಬಿಜೆಪಿ ಸಂಸದರಿದ್ದರೂ ಸೂಕ್ತ ಪರಿಹಾರ ಸಿಗುತ್ತಿಲ್ಲ. ಈ ಸಂಸದರು ಸ್ವಾಭಿಮಾನವನ್ನು ಚಿಪ್ಪಿನೊಳಗೆ ಎಳೆದುಕೊಂಡ ಮೃದ್ವಂಗಿಗಳಂತೆ ಜಡವಾಗಿದ್ದಾರೆ. ಜನರ ಶಾಪ ತಟ್ಟುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಲಿ ಎಂದು ಮಾತಿನಲ್ಲೇ ಚಾಟಿ ಬೀಸಿರುವ ದಿನೇಶ್ ಗುಂಡೂರಾವ್, ರಾಜ್ಯ ಸರ್ಕಾರಕ್ಕೆ ಪ್ರವಾಹ ಪರಿಸ್ಥಿತಿ ನಿಭಾಯಿಸುವದಕ್ಕಿಂತಲೂ ಉಪ ಚುನಾವಣೆಯೇ ಮುಖ್ಯವಾದಂತಿದೆ ಎಂದು ಲೇವಡಿ ಮಾಡಿದ್ದಾರೆ. ಪ್ರವಾಹ ಪೀಡಿತರ ನೋವಿಗೆ ಸ್ಪಂದಿಸುವ ಕನಿಷ್ಠ ಕಾಳಜಿಯೂ ಸರ್ಕಾರಕ್ಕೆ ಇದ್ದಂತೆ ಕಾಣಿಸುತ್ತಿಲ್ಲ. ತೋರುಗಾಣಿಕೆಯ‌ ಪರಿಹಾರ ಕ್ರಮವನ್ನೇ ದೊಡ್ಡ ಸಾಧನೆ ಎಂದು ಬೆನ್ನು ತಟ್ಟಿಕೊಳ್ಳುತ್ತಿದೆ. ಮನೆ ಮಠ ಇಲ್ಲದೆ ನೊಂದ ಸಂತ್ರಸ್ತರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುವುದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ :  ಭಾರತದ ಕೋವಾಕ್ಸಿನ್ ಎಷ್ಟು ಪರಿಣಾಮಕಾರಿ ಅನ್ನೋದಕ್ಕೆ ಇದೇ ಉದಾಹರಣೆ!

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800