ಜಮ್ಮು ಮತ್ತು ಕಾಶ್ಮೀರದ ಕುರಿತು ಮತ್ತೊಂದು ಮಸೂದೆ ಅಂಗೀಕಾರ!!



ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕೇಡರ್ ನ ನಾಗರಿಕ ಸೇವಾ ಅಧಿಕಾರಿಗಳನ್ನು ಅರುಣಾಚಲ ಪ್ರದೇಶ, ಗೋವಾ, ಮಿಜೋರಾಂ ಕೇಂದ್ರಾಡಳಿತ ಪ್ರದೇಶ(ಎಜಿಎಂಯುಟಿ) ಕೇಡರ್‌ನೊಂದಿಗೆ ವಿಲೀನಗೊಳಿಸುವ ಸುಗ್ರೀವಾಜ್ಞೆ ಬದಲಾಯಿಸುವ ಜಮ್ಮು ಮತ್ತು ಕಾಶ್ಮೀರ ಪುನರ್ ಸಂಘಟನೆ(ತಿದ್ದುಪಡಿ) ಮಸೂದೆ 2021 ಅನ್ನು ರಾಜ್ಯಸಭೆ ಸೋಮವಾರ ಅಂಗೀಕರಿಸಲಾಗಿದೆ.

ಈ ಮಸೂದೆಯನ್ನು ಕಳೆದ ವಾರ ಸಂಸತ್ತಿನ ಮೇಲ್ಮನೆಯಲ್ಲಿ ಮಂಡಿಸಲಾಗಿದ್ದು, ಚರ್ಚೆಯ ಬಳಿಕ ಇಂದು ಅಂಗೀಕರಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಈಗ ಭಾರತದ ಸಂವಿಧಾನವು ಸಂಪೂರ್ಣವಾಗಿ ಅನ್ವಯವಾಗುತ್ತಿದೆ ಮತ್ತು ಈ ಕಾಯ್ದೆ ಮೂಲಕ ಕೇಂದ್ರಾಡಳಿತ ಪ್ರದೇಶದ ಅನುಭವ ಹೊಂದಿರುವ ಅಧಿಕಾರಿಗಳನ್ನು ಕಾಶ್ಮೀರ ಪಡೆದುಕೊಳ್ಳಬಹುದು ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು 170 ಕೇಂದ್ರದ ಕಾನೂನುಗಳನ್ನು ಜಾರಿಗೊಳಿಸಲಾಗಿದೆ ಮತ್ತು ಈ ಮಸೂದೆಯು ಜಮ್ಮು, ಕಾಶ್ಮೀರ ಮತ್ತು ಲೇಹ್ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಅಧಿಕಾರಿಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ :  ಬ್ರೇಕಿಂಗ್ ನ್ಯೂಸ್ : ಮಧ್ಯಪ್ರದೇಶದ ಬಿಜೆಪಿ ಸಂಸದ ನಿಧನ!