ಬ್ರೇಕಿಂಗ್ ; ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ! ಓದಲು ಇಲ್ಲಿ ಕ್ಲಿಕ್ ಮಾಡಿಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ನಿನ್ನೆ ರಾತ್ರಿಯಿಂದಲೇ ಅವರ ಆರೋಗ್ಯ ಹದಗೆಟ್ಟಿತ್ತು. ಶ್ವಾಸಕೋಶದ ಸೋಂಕು ಉಲ್ಬಣಗೊಂಡು ಸೆಪ್ಟಿಕ್ ಆಗಿತ್ತು ಎಂದು ಇಂದು ಬೆಳಗ್ಗೆಯಷ್ಟೇ ಆರ್ಮಿ ಆಸ್ಪತ್ರೆ ಮಾಹಿತಿ ನೀಡಿತ್ತು.

ಪ್ರಣಬ್ ಮುಖರ್ಜಿ ಮೃತಪಟ್ಟಿದ್ದನ್ನು ಅವರ ಪುತ್ರ ಅಭಿಜಿತ್ ಮುಖರ್ಜಿ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ. ನನ್ನ ತಂದೆ ಪ್ರಣಬ್ ಮುಖರ್ಜಿ ಅವರು ನಿಧನರಾಗಿದ್ದಾರೆ ಎಂಬುದನ್ನು ಭಾರವಾದ ಹೃದಯದಿಂದ ನಿಮಗೆಲ್ಲರಿಗೂ ತಿಳಿಸುತ್ತಿದ್ದೇನೆ. ದೆಹಲಿಯ ಆರ್ಆರ್ ಆಸ್ಪತ್ರೆಯ ವೈದ್ಯರು ಅತ್ಯುತ್ತಮವಾಗಿ ಚಿಕಿತ್ಸೆ ನೀಡಿದ್ದಾರೆ. ಅವರ ಆರೋಗ್ಯಕ್ಕಾಗಿ ಈ ದೇಶದ ಜನರು ಪ್ರಾರ್ಥಿಸಿದ್ದರು. ಅವರೆಲ್ಲರಿಗೂ ನಾನು ಕೈಮುಗಿದು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.