ಸಿದ್ದರಾಮಯ್ಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ! ಫೋಟೋ ವೈರಲ್ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾಲು ಹಿಡಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಶೀರ್ವಾದ ಪಡೆದ ಘಟನೆ ನಡೆದಿದೆ. ಬುಧವಾರ ನಡೆದ ಜನಧ್ವನಿ ಯಾತ್ರೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಕಾಲು ಹಿಡಿದು ಡಿಕೆ ಶಿವಕುಮಾರ್‌ ಆಶೀರ್ವಾದ ಪಡೆದುಕೊಂಡಿದ್ದಾರೆ.

ಎಐಸಿಸಿ ಸಂಧಾನಕಾರರಾಗಿ ಮಧು ಯಕ್ಷಿ ಗೌಡ ರಾಜ್ಯಕ್ಕೆ ಆಗಮಿಸಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದೀಗ ಡಿಕೆ ಶಿವಕುಮಾರ್‌ ಸಿದ್ದರಾಮಯ್ಯ ಕಾಲು ಹಿಡಿಯುವ ಮೂಲಕ ಭಾರಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದಾರೆ. ಸಿದ್ದರಾಮಯ್ಯರ ಕಾಲು ಹಿಡಿದು ಆಶೀರ್ವಾದ ಪಡೆಯುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.