ಕರಪತ್ರ ಮುದ್ರಿಸುತ್ತಿದ್ದ ಕಾರ್ಯಕರ್ತನಿಗೆ ಬಂಪರ್ ಗಿಫ್ಟ್ ನೀಡಿದ ಬಿಜೆಪಿ ಹೈಕಮಾಂಡ್!ವಿಧಾನಸಭಾ ಉಪಚುನಾವಣೆ ಮುಗಿದಿದೆ. ಈಗ ಬಿಜೆಪಿಯ ಕಣ್ಣು ರಾಜ್ಯಸಭಾ ಉಪಚುನಾವಣೆಯ ಮೇಲಿದೆ. ಈ ವಿಷಯದಲ್ಲಿ ಭಾರತೀಯ ಜನತಾ ಪಕ್ಷದ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರಿಗೆ ಶಾಕ್ ನೀಡಿದ್ದಾರೆ.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/

ಈ ಬಾರಿಯ ರಾಜ್ಯಸಭಾ ಉಪಚುನಾವಣೆಯ ಅಭ್ಯರ್ಥಿಯಾಗಿ ಕರಪತ್ರಗಳನ್ನು ಮುದ್ರಿಸುತ್ತಿದ್ದ ಕೆ. ನಾರಾಯಣ್ ಅವರಿಗೆ ಟಿಕೆಟ್ ನೀಡಿದೆ.

ಅಶೋಕ್ ಗಸ್ತಿ ನಿಧನದಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಮಾಜಿ ಎಂಎಲ್ ಸಿ ಶಂಕರಪ್ಪ ಮತ್ತು ಅಶೋಕ್ ಗಸ್ತಿ ಪತ್ನಿ ಸುಮಾ ಗಸ್ತಿ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದ್ರೆ ಬಿಜೆಪಿ ಮತ್ತೊಮ್ಮೆ ಪಕ್ಷಕ್ಕಾಗಿ ಪರದೆ ಹಿಂದೆ ಕೆಲಸ ಮಾಡಿದ ಕಾರ್ಯಕರ್ತರನ್ನ ಗುರುತಿಸಿದೆ.

ಕೆ ನಾರಾಯಣ್ ಅವರು ಮೂಲತಃ ಮಂಗಳೂರಿನವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಆರೆಸ್ಸೆಸ್ ಕಾರ್ಯಕರ್ತರಾಗಿರುವ ನಾರಾಯಣ್ ಅವರು ಪಕ್ಷದ ಕರಪತ್ರಗಳನ್ನು ಮುದ್ರಿಸುವ ಕೆಲಸ ಮಾಡುತ್ತಿದ್ದಾರೆ.