BREAKING NEWS: ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದ ಕಮಲ್ ಹಸನ್ ಆಪ್ತ ಎ.ಅರುಣಾಚಲಂ!ಚೆನ್ನೈ: ಕಮಲ್ ಹಸನ್ ಆಪ್ತ, ಮಕ್ಕಳ್ ನಿಧಿ ಮಯ್ಯಮ್ ಪಕ್ಷದ ನಾಯಕ ಎ.ಅರುಣಾಚಲಂ ಅವರು ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಕೇಂದ್ರ ಸಚಿವ, ಬಿಜೆಪಿ ನಾಯಕ ಪ್ರಕಾಶ್ ಜಾವ್ಢೇಕರ್ ಸಮ್ಮುಖದಲ್ಲಿ ಚೆನ್ನೈನಲ್ಲಿ ಎ.ಅರುಣಾಚಲಂ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಕಮಲ್ ಹಸನ್ ಅವರ ಮಕ್ಕಳ್ ನಿಧಿ ಮಯ್ಯಮ್ ಪಕ್ಷದಲ್ಲಿ ಪ್ರಮುಖರಾಗಿದ್ದ ಎ. ಅರುಣಾಚಲಂ ಅವರ ಬಿಜೆಪಿ ಸೇರ್ಪಡೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಮುಂದಿನ ವರ್ಷದ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ದಕ್ಷಿಣದ ರಾಜ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದೆ. ಈಗಾಗಲೇ ಅಣ್ಣಾಮಲೈ, ಖುಷ್ಬೂ ಸುಂದರ್ ಸೇರಿದಂತೆ ಹಲವು ಪ್ರಮುಖರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.

http://www.uralsayurveda.in https://www.facebook.com/DrUrals/