ಕಾಂಗ್ರೆಸ್ ಪ್ರತಿಭಟನೆಗೆ ಹೋಗುವಾಗ ಯುವಕನ ಸಾವು! ಏನಾಯಿತು?ಚಿಕ್ಕಮಗಳೂರು: ಕಾಂಗ್ರೆಸ್ ಪ್ರತಿಭಟನೆಗೆ ತೆರಳುವಾಗ ಅಪಘಾತವಾಗಿದ್ದು, ಯುವಕ ಸಾವನಪ್ಪಿರುವ ಘಟನೆ ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಳಿ ನಡೆದಿದೆ.

21 ವರ್ಷದ ಮಿಥುನ್ ಮೃತ ದುರ್ದೈವಿ. ಮಿಥುನ್ ಮೂಲತಃ ತರೀಕೆರೆ ತಾಲೂಕಿನ ನೇರಲಕೆರೆ ಗ್ರಾಮದ ಯುವಕ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಇಂದು ಚಿಕ್ಕಮಗಳೂರು ನಗರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಭಾಗವಹಿಸಲು ಆಗಮಿಸುತ್ತಿದ್ದ. ಬೈಕ್ ರೈಡ್ ಮಾಡಿಕೊಂಡು ಬರುವ ವೇಳೆ ಓಮ್ನಿ ಹಾಗೂ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಈ ವೇಳೆ ಮಿಥುನ್ ಕೂಡ ಗಂಭೀರ ಗಾಯಗೊಂಡಿದ್ದ. ಘಟನೆ ಬಳಿಕ ಸ್ಥಳೀಯರು ಕೂಡಲೇ ಮಿಥುನ್ ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ತೀವ್ರ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಅಪಘಾತದ ವಿಷಯ ತಿಳಿದು ಚಿಕ್ಕಮಗಳೂರು ನಗರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನೂ ಕೈಬಿಟ್ಟಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.