‘ಸರಿಗಮಪ’ ಗ್ರ್ಯಾಂಡ್ ಫಿನಾಲೆಯಲ್ಲಿನ ಈ ಎಡವಟ್ಟಿನಿಂದ ವಾಹಿನಿ ವಿರುದ್ಧ FIR  ದಾಖಲು?!ಬೆಂಗಳೂರು: ಕೊರೋನಾ ನಿಯಮ ಉಲ್ಲಂಘಿಸಿ ‘ಸರಿಗಮಪ’ ಗ್ರ್ಯಾಂಡ್ ಫಿನಾಲೆ ಆಯೋಜಿಸಿದ್ದ ಕಾರಣಕ್ಕೆ ಜೀ ಕನ್ನಡ ವಾಹಿನಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೈಸೂರು ರಸ್ತೆಯ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಜೀ ಕನ್ನಡ ವಾಹಿನಿಯ ‘ಸರಿಗಮಪ’ ಗ್ರ್ಯಾಂಡ್ ಫಿನಾಲೆ ಸ್ಪರ್ಧೆ ಆಯೋಜಿಸಲಾಗಿತ್ತು.

ಇದರಲ್ಲಿ 100 ಜನ ಭಾಗವಹಿಸಲು ಅನುಮತಿ ಪಡೆದುಕೊಂಡಿದ್ದು, ಅದಕ್ಕಿಂತಲೂ ಅಧಿಕ ಮಂದಿ ಭಾಗಿಯಾಗಿದ್ದರು. ಮಾಸ್ಕ್ ಧರಿಸದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/