ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಂಚರಿಸುತ್ತಿದ್ದ ಕಾರಿನ ಮೇಲೆ ದಾ’ಳಿ!  ; ‘ಪ್ರಿ ಪ್ಲಾನ್ಡ್ ಅ’ಟ್ಯಾಕ್’ ??!ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಇತರ ನಾಯಕರು ಸಂಚರಿಸುತ್ತಿದ್ದ ಕಾರುಗಳ ಮೇಲೆ ದಾ’ಳಿ ನಡೆದಿದೆ. ಕಿಡಿ’ಗೇಡಿಗಳು ಕಲ್ಲು, ಇಟ್ಟಿಗೆಗಳನ್ನ ಬಿಜೆಪಿ ನಾಯಕರ ಕಾರಿನ ಕಡೆ ತೂರಿದ್ದಾರೆ. ಇದರ ಪರಿಣಾಮ ಕಾರಿನ ಗಾಜುಗಳು ಪುಡಿಯಾಗಿದ್ದು, ಬಿಜೆಪಿ ನಾಯಕರಾದ ಕೈಲಾಶ್ ವಿಜಯವರ್ಗೀಯ ಮತ್ತು ಮುಕುಲ್ ರಾಯ್ಗೆ ಗಾಯಗಳಾಗಿವೆ. ಜೆ.ಪಿ. ನಡ್ಡಾ ಬುಲೆಟ್ ಪ್ರೂಫ್ ಕಾರಿನಲ್ಲಿ ಇದ್ದಿದ್ದರಿಂದ ಅವರಿಗೇನೂ ಆಗಿಲ್ಲ. ಕಿಡಿ’ಗೇಡಿಗಳು ದಾ’ಳಿ ನಡೆಸಿರೋದು ವಿಡಿಯೋದಲ್ಲಿ ಸೆರೆಯಾಗಿದೆ.

ADVERTISEMENT

ಘಟನೆ ಬೆನ್ನಲ್ಲೇ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಕೆಂಡಾಮಂಡಲವಾಗಿದೆ. ಪೊಲೀಸರ ಸಮ್ಮುಖದಲ್ಲೇ ನಮ್ಮ ಮೇಲೆ ದಾ’ಳಿ ನಡೆದಿದೆ. ಇದು ಪ್ರಿ ಪ್ಲಾನ್ಡ್ ಅ’ಟ್ಯಾಕ್ ಅಂತ ಬಿಜೆಪಿ ಆರೋಪಿಸಿದೆ. ಪಶ್ಚಿಮ ಬಂಗಾಳದಲ್ಲಿ ಇದಕ್ಕೆಲ್ಲಾ ಅಂತ್ಯ ಹಾಡ್ತೀವಿ. 2021ರ ಚುನಾವಣೆಯಲ್ಲಿ ಗೆಲ್ತೀವಿ ಅಂತ ಜೆ.ಪಿ. ನಡ್ಡಾ ಗುಡುಗಿದ್ದಾರೆ. ಘಟನೆ ಸಂಬಂಧ ಪಶ್ಚಿಮ ಬಂಗಾಳ ಸರ್ಕಾರದಿಂದ ಕೇಂದ್ರ ಗೃಹ ಇಲಾಖೆ ವರದಿ ಕೇಳಿದೆ. ಪಶ್ಚಿಮ ಬಂಗಾಳ ರಾಜ್ಯಪಾಲರು ಕೂಡ ಮಮತಾ ಬ್ಯಾನರ್ಜಿ ಸರ್ಕಾರ ಮತ್ತು ಪೊಲೀಸರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/