ಮಾರಾಟ ಮಾಡಲು ಹೋಗಿ ಬಕ್ರಾ ಆದ ಕೇಜ್ರಿವಾಲ್ ಮಗಳು! ಪಂಗನಾಮ



ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಗಳಿಗೆ ವಂಚಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.

ಹರಿಯಾಣದ ನುಹ್ ನಿವಾಸಿ ಸಾಜಿದ್(26), ಮಥುರಾ ಮೂಲದ ಕಪಿಲ್(18) ಮತ್ತು ಮನ್ವಿಂದರ್ ಸಿಂಗ್ (25) ಅವರನ್ನು ಭಾರತಪುರ-ಮಥುರಾ ಗಡಿಯಲ್ಲಿ ತಾಂತ್ರಿಕ ಕಣ್ಗಾವಲು ಸಹಾಯದಿಂದ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ವಾರಿಸ್(25) ಎಂದು ಗುರುತಿಸಲಾಗಿದ್ದು, ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆನ್ಲೈನ್ ವೆಬ್ಸೈಟ್ ಓಎಲ್‌ಎಕ್ಸ್‌ನಲ್ಲಿ ಸೆಕೆಂಡ್ ಹ್ಯಾಂಡ್ ಸೋಫಾ ಮಾರಲು ಮುಂದಾಗಿದ್ದ ಕೇಜ್ರಿವಾಲ್ ಅವರ ಪುತ್ರಿಗೆ ಆ ಸೋಫಾ ಕೊಳ್ಳುವುದಾಗಿ ನಂಬಿಸಿ ಆಕೆಯ ಬ್ಯಾಂಕ್ ಖಾತೆಗೆ ಸ್ವಲ್ಪ ಹಣವನ್ನು ಹಾಕಿದ್ದ. ನಂತರ ಆಕೆಗೆ ಬಾರ್ ಕೋಡ್ ಕಳುಹಿಸಿ, ಅದನ್ನು ಸ್ಕ್ಯಾನ್ ಮಾಡಲು ಹೇಳಿದ್ದ. ಆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುತ್ತಿದ್ದಂತೆ ಆಕೆಯ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಆಗಿತ್ತು. ಈ ಮೂಲಕ ಸೋಫಾ ಖರೀದಿಸುವ ನೆಪದಲ್ಲಿ ಈ ನಾಲ್ವರು ಅರವಿಂದ್ ಕೇಜ್ರಿವಾಲ್ ಮಗಳಿಗೆ 34,000 ರೂ. ಪಂಗನಾಮ ಹಾಕಿದ್ದರು.