ನಾಡ್ಡಾ ರವರ ಕಾರಿನಮೇಲಾದ ದಾ’ಳಿಯ ಕುರಿತು ಮಮತಾ ಬ್ಯಾನರ್ಜಿ ಹೇಳಿದ್ದು ಹೀಗೆ?!

ಕೋಲ್ಕತ್ತಾ: ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ಮೇಲೆ ನಡೆದ ದಾ’ಳಿ ಯೋಜಿತ ಕೃತ್ಯ ಇರಬಹುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಶಯ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಗುರುವಾರ ಪ್ರತಿಕ್ರಿಯಿಸಿರುವ ಅವರು,’ನಿಮ್ಮೊಂದಿಗೆ ಕೇಂದ್ರ ಭದ್ರತಾ ಪಡೆ ಇದೆ. ಯಾರಾದರೂ ನಿಮ್ಮ ಮೇಲೆ ಹೇಗೆ ದಾ’ಳಿ ಮಾಡಬಹುದು?’ ಎಂದು ನಡ್ಡಾ ಅವರನ್ನು ಪ್ರಶ್ನಿಸಿದ್ದಾರೆ. ‘ನೀವು ರಾಜ್ಯದ ಭದ್ರತಾ ಪಡೆಗಳನ್ನು ಅವಲಂಬಿಸುವ ಬದಲು, ಕೇಂದ್ರದ ಭದ್ರತಾ ಪಡೆಗಳನ್ನು ಅವಲಂಬಿಸಿದ್ದೀರಿ. ಈ ದಾ’ಳಿಯು ಯೋಜಿತ ಕೃತ್ಯ ಇರಬಹುದು.

ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದೇನೆ. ಆದರೆ, ನಾನು ಎಂದಿಗೂ ಸುಳ್ಳನ್ನು ಹೇಳುವುದಿಲ್ಲ’ ಎಂದು ಮಮತಾ ಹೇಳಿದ್ದಾರೆ. ಕೋಲ್ಕತ್ತಾದಿಂದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬೆಂಗಾವಲು ಪಡೆಯ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ನಡ್ಡಾ ಅವರ ಜತೆಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಕಾರಿನ ಮೇಲೂ ದಾ’ಳಿ ಮಾಡಲಾಯಿತು ಎಂದು ಬಿಜೆಪಿ ಮೂಲಗಳು ತಿಳಿಸಿವೆ.‌

ಇದನ್ನೂ ಓದಿ :  ವೆರಿಕೋಸ್ ವೇಯ್ನ್ ಲಕ್ಷಣಗಳು ಏನು? ಇದನ್ನು ಗುಣಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/