ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್!ಲಕ್ನೋ: ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಯುಪಿಯಲ್ಲಿ ಮಹತ್ವದ ಬದಲಾವಣೆಗಳು ಆಗುತ್ತಲೇ ಇವೆ. ಮುಂದಿನ ಮೂರು ದಿನಗಳಲ್ಲಿ ಯುಪಿ ವಿಶೇಷ ಭದ್ರತಾ ಪಡೆ (UPSSF) ಯ ರಚನೆಗೆ ನೀಲನಕ್ಷೆ ಸಿದ್ಧಪಡಿಸುವಂತೆ ಉತ್ತರ ಪ್ರದೇಶ (ಯುಪಿ) ಸರ್ಕಾರ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದೆ ಎಂದು ಮೂಲಗಳು ವರದಿ ಮಾಡಿವೆ. ಪಡೆಯ ರಚನೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ ಹದಿನೈದು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ. ಈ ಪಡೆಯು ರಚನೆಯ ಮೊದಲ ಹಂತದಲ್ಲಿ ಒಟ್ಟು 9,919 ಸಿಬ್ಬಂದಿಗಳನ್ನು ಹೊಂದಿರುತ್ತದೆ. ಇದನ್ನು ಮೂರು ತಿಂಗಳಲ್ಲಿ ಕಾರ್ಯಗತಗೊಳಿಸಲಾಗುತ್ತದೆ ಎಂದು ಹೇಳಲಾಗಿದೆ.

ಈ ಪಡೆ ಪ್ರಧಾನ ಕಚೇರಿಯನ್ನು ಲಕ್ನೋದಲ್ಲಿ ಹೊಂದಿರುತ್ತದೆ ಮತ್ತು ಆರಂಭದಲ್ಲಿ ಒಟ್ಟು ಐದು ಬೆಟಾಲಿಯನ್‌ಗಳನ್ನು ಹೊಂದಿರುತ್ತದೆ. ಮೊದಲ ಹಂತದಲ್ಲಿ ಒಟ್ಟು 9,919 ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ, ಇದರ ನಂತರ ಇನ್ನೂ 1,913 ಹುದ್ದೆಗಳನ್ನು ರಚಿಸಲಾಗುತ್ತದೆ ಎನ್ನಲಾಗಿದೆ. ಯುಪಿಎಸ್ಎಸ್ಎಫ್ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಾದರಿಯಲ್ಲಿ ಸೇವೆ ಸಲ್ಲಿಸುತ್ತದೆ ಮತ್ತು ಪ್ರಮುಖ ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಮತ್ತು ಕೈಗಾರಿಕಾ ಸಂಸ್ಥೆಗಳನ್ನು ಭದ್ರಪಡಿಸುವ ಜವಾಬ್ದಾರಿಯನ್ನು ಹೊಂದಿರುತ್ತದೆ. ಇದನ್ನು ಮೆಟ್ರೋ ರೈಲು, ವಿಮಾನ ನಿಲ್ದಾಣಗಳು, ಕೈಗಾರಿಕಾ ಸಂಸ್ಥೆಗಳು, ನ್ಯಾಯಾಲಯಗಳು, ಧಾರ್ಮಿಕ ಸ್ಥಳಗಳು, ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಲ್ಲಿ ನಿಯೋಜಿಸಲಾಗುತ್ತದೆ ಎನ್ನಲಾಗಿದೆ. ಈ ವಿಶೇಷ ಪಡೆಯ ರಚನೆಯನ್ನು ಮೊದಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜೂನ್ 26 ರಂದು ಘೋಷಿಸಿದ್ದರು.
ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800