ಬುದ್ದಿ ಮುಚ್ಚಿದ ಕೆಂಡದಂತಾಗಿದೆ: ಮಾಜಿ ಸಿಎಂಬೆಂಗಳೂರು : ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ನಡೆಯುತ್ತಿರೋ ಕಿತ್ತಾಟಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸಾಲು ಸಾಲು ಟ್ವೀಟ್ ಮುಖಾಂತರ ಬಿಜೆಪಿ ವಿರುದ್ದ ಆಕ್ರೋಶ ತೊರಿದ ಕುಮಾರಸ್ವಾಮಿ, ಚಿತೆಗೆ ಹಚ್ಚಿದ ಜ್ವಾಲೆ ಆರಿಲ್ಲ. ಬಿಜೆಪಿ ಅಧಿಕಾರಕ್ಕಾಗಿ ಕಿತ್ತಾಡುತ್ತಿದೆ ಅಂತ ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯದಲ್ಲಿ ರಾಜಕೀಯ ತೀವ್ರ ಬಿಕ್ಕಟ್ಟು ಎದುರಾಗಿದೆ. ಅದು ಹೆಮ್ಮಾರಿ ಕೋವಿಡ್‌ ಅಟ್ಟಹಾಸ ಮೆರೆಯುತ್ತಿರುವ ಹೊತ್ತಿನಲ್ಲಿ, ಬ್ಲಾಕ್‌ ಫಂಗಸ್‌ ಎಂಬ ಭಯಾನಕ ರೋಗ ಜನರನ್ನು ಜೀವ ತೆಗೆದುಕೊಳ್ಳುತ್ತಿರುವ ಗಳಿಗೆಯಲ್ಲಿ, ಕನ್ನಡದ ಸ್ವಾಭಿಮಾನಕ್ಕೆ ದಕ್ಕೆಯಾಗಿರುವ ಕಾಲಘಟ್ಟದಲ್ಲಿ.ರಾಜ್ಯ ಸಂದಿಗ್ಧತೆಗೆ ಸಿಲುಕಿರುವ ಈ ಹೊತ್ತಿನಲ್ಲಿ ಇದೆಂಥಾ ರಾಜಕೀಯ? ಇದು ಸಕಾಲದ ಕಾರ್ಯವೇ! ಈಗ ರಾಜ್ಯದ ಎದುರಿಗೆ ಇರುವುದು ನಾಯಕತ್ವದ ಪ್ರಶ್ನೆಯೋ? ಅಥವಾ ಜನರ ಹಿತದ ಪ್ರಶ್ನೆಯೋ? ಅಂತ ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಕೊವಿಡ್ ನಿಂದ ಮೃತಪಟ್ಟ ಜನರ ಚಿತೆಗಳಿಗೆ ಹಚ್ಚಿದ ಜ್ವಾಲೆ ಇನ್ನೂ ಸಹ ಆರಿಲ್ಲ. ಅದು ಎಂದು ಆರುತ್ತದೆ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ ಅಷ್ಟ ಜನರನ್ನಾ ಕೊರೊನ್ ಬಲಿ ತೆಗೆದುಕೊಳ್ಳುತ್ತಿದೆ. ಇಂಥ ವೇಳೆಯಲ್ಲಿ ಇಂತಹ ಕೀಳುಮಟ್ಟದ ರಾಜಕಾರಣ ಅವಶ್ಯವಿದೆಯೇ?

ಇದನ್ನೂ ಓದಿ :  ಘರ್ಜಿಸಿದ ಯಡಿಯೂರಪ್ಪ

ರಾಜ್ಯ ಸರ್ಕಾರ ಕೋವಿಡ್‌ ಸ್ಥಿತಿಯನ್ನು ನಿಭಾಯಿಸಿದ ರೀತಿಗೆ ವ್ಯಾಪಕ ಟೀಕೆ ಎಲ್ಲೆಡೆ ವ್ಯಕ್ತವಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸಿ ರಾಜಕೀಯ ಮಾಡುವುದು ಬೇಡ ಎಂದು ಜೆಡಿಎಸ್‌ ನಿರ್ಧರಿಸಿತ್ತು. ಬಿಎಸ್‌ ಯಡಿಯೂರಪ್ಪನವರು ತಾವು ಖರೀದಿಸಿ ತಂದ ಕುದುರೆಗಳ ಮೇಲೆ ತಾವೇ ಸವಾರಿ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಲೇ ಇರಲಿಲ್ಲ. ಅದರ ಬದಲಿಗೆ ಮಾಧ್ಯಮಗಳು ಬಣ್ಣಿಸುವ ‘ಸೋಕಾಲ್ಡ್‌ ಹುಲಿ, ಬಾಹುಬಲಿ, ಮುಂತಾದವರನ್ನು ಮುಖ್ಯಮಂತ್ರಿ ಸೀಟಿನ ಮೇಲೆ ಕೂರಿಸಿದ್ದೇ ಸದ್ಯದ ರಾಜಕೀಯ ದುಸ್ಥಿತಿಗೆ ನೇರ ಕಾರಣ ಎಂದು ಟೀಕಿಸಿದ್ದಾರೆ.ಇದು ಯಡಿಯೂರಪ್ಪನವರ ಸ್ವಯಂಕೃತ ಅಪರಾಧ ಅಂತ ಲೇವಡಿ ಮಾಡಿದರು.