ರಾಜ್ಯವನ್ನೇ ಬೆಚ್ಚಿಬೀಳಿಸಿದ ಸಚಿವ ಸಂಪುಟ ವಿಸ್ತರಣೆ ; ಮಹತ್ವದ ನಿರ್ಧಾರ ಘೋಷಿಸಿದ ಸಿಎಂ ಯಡಿಯೂರಪ್ಪಾ?ಬೆಂಗಳೂರು: ಶೀಘ್ರವೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ರಾಷ್ಟ್ರೀಯ ನಾಯಕರಾದ ಅಮಿತ್ ಶಾ, ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೆಲವರನ್ನು ಸಂಪುಟದಿಂದ ಕೈಡುವ ಬಗ್ಗೆ ಸಿಎಂ ಸುಳಿವು ನೀಡಿದ್ದಾರೆ. ವರಿಷ್ಠರ ಜೊತೆ ಚರ್ಚೆ ಬಳಿಕ ಸಂಪುಟದಿಂದ ಯಾರನ್ನು ಬಿಡಬೇಕು? ಯಾರನ್ನು ಸೇರಿಸಬೇಕೆಂದು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಉಪ ಚುನಾವಣೆಯಲ್ಲಿ ವಿಜಯೆಂದ್ರ ಸ್ಪರ್ಧೆ ಮಾಡುವುದಿಲ್ಲ. ಬಸವಕಲ್ಯಾಣದಲ್ಲಿ ವಿಜಯೇಂದ್ರ ಸ್ಪರ್ಧಿಸುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಎರಡು ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ.

ಜಾಹಿರಾತು : ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ http://www.uralsayurveda.in https://www.facebook.com/DrUrals/ +91 81053 71042 , 8310191364.

ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡಲಾಗುವುದು ದೆಹಲಿ ಭೇಟಿ ಬಳಿಕವೇ ಸಂಪುಟ ವಿಸ್ತರಣೆ ಪುನಾರಚನೆ ನಡೆಯಲಿದೆ. ಕೆಲವರನ್ನು ಬಿಡಬೇಕಾಗುತ್ತದೆ. ಕೆಲವರನ್ನು ಸೇರಿಸಿಕೊಳ್ಳಬೇಕಿದೆ. ದೊಡ್ಡ ಪ್ರಮಾಣದಲ್ಲಿ ಯೋಚನೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ನಾನು ಉತ್ತರ ಕೊಡುವುದಿಲ್ಲ. ರಾಜ್ಯದ ಜನರೇ ತಕ್ಕ ಉತ್ತರ ಕೊಡುತ್ತಾರೆ. ಉಪ ಚುನಾವಣೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸುತ್ತೇವೆ. ಶಿರಾದಲ್ಲಿ ಮತದಾರರಿಗೆ ನೀಡಿದ ಭರವಸೆ ಈಡೇರಿಸಲಾಗುವುದು. ಮುಂದಿನ ಎರಡು ವರ್ಷ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಲಾಗುವುದು. ಮತ್ತಷ್ಟು ಉತ್ಸಾಹದಿಂದ ಕೆಲಸ ಮಾಡಲು ಉಪಚುನಾವಣೆ ಫಲಿತಾಂಶ ನಮಗೆ ಪ್ರೋತ್ಸಾಹ ನೀಡಿದೆ ಎಂದು ಹೇಳಿದ್ದಾರೆ.