ಆಂದ್ರ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿಗೆ ಬಿಗ್ ಶಾಕ್!, ಮುಖ್ಯಮಂತ್ರಿ ಹುದ್ದೆಯಿಂದ ಹೊರಕ್ಕೆ??ಹೊಸದಿಲ್ಲಿ: ಸುಪ್ರೀಂಕೋರ್ಟ್‌ನ ಹಾಲಿ ನ್ಯಾಯಾಧೀಶರೊಬ್ಬರ ವಿರುದ್ಧ ಆರೋಪ ಹೊರಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಕೋರಿ ಇಬ್ಬರು ವಕೀಲರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂಕೋರ್ಟ್‌ನ ಎರಡನೇ ಅತ್ಯಂತ ಹಿರಿಯ ನ್ಯಾಯಾಧೀಶರಾದ ಜಸ್ಟಿಸ್ ಎನ್.ವಿ. ರಮಣ ವಿರುದ್ಧ ಹಗರಣದ ಹೇಳಿಕೆ ನೀಡಿರುವ ರೆಡ್ಡಿ ಅವರನ್ನು ಸಾಂವಿಧಾನಿಕ ಹುದ್ದೆಯಿಂದ ಕಿತ್ತುಹಾಕುವಂತೆ ಕೋರಿ ವಕೀಲರಾದ ಜಿ.ಎಸ್. ಮಣಿ ಹಾಗೂ ಪ್ರದೀಪ್ ಕುಮಾರ್ ಯಾದವ್ ಪಿಐಎಲ್ ಸಲ್ಲಿಸಿದ್ದಾರೆ. ಜಗನ್ ರೆಡ್ಡಿ ಸ್ವಯಂ ಅಕ್ರಮ ಹಣ ವರ್ಗಾವಣೆ ಹಾಗೂ ಭ್ರಷ್ಟಾಚಾರ ಸೇರಿ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಹಾಲಿ ನ್ಯಾಯಾಧೀಶರ ವಿರುದ್ಧ ಸಾರ್ವಜನಿಕವಾಗಿ ಮಾಧ್ಯಮಗಳಲ್ಲಿ ತನ್ನ ಸಾಂವಿಧಾನಿಕ ಹುದ್ದೆಯನ್ನು ಬಳಸಿಕೊಂಡು ತಪ್ಪು,ಅಸ್ಪಷ್ಟ, ರಾಜಕೀಯ ಹಾಗೂ ಹಗರಣದ ಹೇಳಿಕೆ ನೀಡಿದ್ದಾರೆ.

ರೆಡ್ಡಿ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಅನರ್ಹರೆಂದು ಪರಿಗಣಿಸಬೇಕೆಂದು ಪಿಐಎಲ್‌ನಲ್ಲಿ ಆಗ್ರಹಿಸಲಾಗಿದೆ. ಈ ತಿಂಗಳಾರಂಭದಲ್ಲಿ ಭಾರತದ ಮುಖ್ಯ ನ್ಯಾಯಾಧೀಶರಾದ ಎಸ್‌.ಎ. ಬೋಬ್ಡೆಗೆ ಪತ್ರ ಬರೆದಿದ್ದ ರೆಡ್ಡಿ ಮುಂದಿನ ಸಿ ಜೆ ಐ ಸ್ಪರ್ಧೆಯಲ್ಲಿರುವ ಜಸ್ಟಿಸ್ ರಮಣ ವಿರುದ್ಧ ಭ್ರಷ್ಟಾಚಾರ ಸಹಿತ ಹಲವು ಆರೋಪಗಳನ್ನು ಮಾಡಿದ್ದರು. ಸಿಜೆ ಐಗೆ ಪತ್ರ ಬರೆದ ಮರುದಿನ ಪತ್ರಿಕಾಗೋಷ್ಠಿ ನಡೆಸಿ ಬಹಿರಂಗವಾಗಿಯೂ ಜಸ್ಟಿಸ್ ರಮಣ ವಿರುದ್ಧ ಆರೋಪಗಳನ್ನು ಹೊರಿಸಿದ್ದರು.

ಇದನ್ನೂ ಓದಿ :  ಕಾಂಗ್ರೆಸ್ ಪಕ್ಷದಲ್ಲೇ ಶುರುವಾಗಿದೆ ಒಳಜಗಳ ; ಸಿದ್ದು ವರ್ಸ್ಸಸ್ ಇಬ್ರಾಹಿಂ!

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800