ಸಿದ್ದು ತವರೂರು ಹಾಗು ಸಾಂಪ್ರಾದಾಯಿಕ ಕಾಂಗ್ರೆಸ್ ಭದ್ರಕೋಟೆಯಲ್ಲಿ ಸದ್ದಿಲ್ಲದೆ ಅರಲುತ್ತಿದೆ ‘ಕಮಲ’ !ಮೈಸೂರು: ಚಾಮರಾಜನಗರ, ಮೈಸೂರು ಜಿಲ್ಲೆ ಮತ್ತು ಹಳೇ ಮೈಸೂರು ಭಾಗ ಕಾಂಗ್ರೆಸ್ ನ ಸಾಂಪ್ರಾದಾಯಿಕ ಭದ್ರಕೋಟೆಯಾಗಿದ್ದು, ನಿಧಾನವಾಗಿ ಬಿಜೆಪಿ ನೆಲೆಯೂರುತ್ತಿದೆ. ಬಿಜೆಪಿ ಸಂಸದ ಮತ್ತು ಹಿರಿಯ ದಲಿತ ಮುಖಂಡ ವಿ.ಶ್ರೀನಿವಾಸ ಪ್ರಸಾದ್ ಅವರು ತಮ್ಮ ಲೋಕಸಭಾ ಕ್ಷೇತ್ರದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೆಲಸ ಮಾಡುತ್ತಿದ್ದು ಈಗಾಗಲೇ ಕೊಳ್ಳೇಗಾಲ, ಚಾಮರಾಜನಗರ ಮತ್ತು ಹುಣಸೂರು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಯಶಸ್ಸಿನ ರುಚಿ ನೋಡಿದ್ದಾರೆ. ಜೆಡಿಎಸ್ ಅನ್ನು ದೂರವಿಡಲು ಕಾಂಗ್ರೆಸ್ ಮತ್ತು ಬಿಜೆಪಿಗಳು ಹನೂರು ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದನ್ನು ಯಾರು ಊಹಿಸಿರಲಿಲ್ಲ, ಗ್ರಾಮ ಪಂಚಾಯಿತಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಎಣ್ಣೆ ಸೀಗೆಕಾಯಿಯಂತೆ ಹೋರಾಟ ನಡೆಸಿದ್ದವು, ಆದರೆ ಶ್ರೀನಿವಾಸ ಪ್ರಸಾದ್ ಕಾಂಗ್ರೆಸ್ ಶಾಸಕ ನರೇಂದ್ರ ಅವರನ್ನು ಬೆಂಬಲಿಸುವ ಮೂಲಕ ಜೆಡಿಎಸ್ ನ ಆರು ಸದಸ್ಯರನ್ನು ಹೊರಗಿಟ್ಟಿದ್ದಾರೆ, 8 ಸದಸ್ಯರನ್ನು ಹೊಂದಿದ್ದ ಕಾಂಗ್ರೆಸ್ ಉಪಾಧ್ಯಕ್ಷ ಪಟ್ಟ ಅಲಂಕರಿಸಿದೆ.

ಕೊಳ್ಳೇಗಾಲದಲ್ಲಿ ಪಕ್ಷೇತರ ಅಭ್ಯರ್ಥಿ ಮತ್ತು ಬಿಎಸ್ ಪಿ ಕೌನ್ಸಿಲರ್ ಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಶ್ರೀನಿವಾಸ್ ಪ್ರಸಾದ್ ಕೆಲಸ ಮಾಡಿದ್ದಾರೆ. 14 ಪಕ್ಷದ ಅಭ್ಯರ್ಥಿಗಳು ಮತ್ತು ಅವರ ಸ್ವಂತ ಮತಗಳೊಂದಿಗೆ, ಕಾಂಗ್ರೆಸ್ ಮತ್ತು ಎಸ್‌ಡಿಪಿಐ ವಿರುದ್ಧ ಬಿಜೆಪಿ ತನ್ನ ಸಂಖ್ಯೆಗಳನ್ನು ನಿರ್ವಹಿಸುತ್ತಿದ್ದು, ಒಟ್ಟಾಗಿ 12 ಸದಸ್ಯರನ್ನು ಹೊಂದಿದೆ,ಇದು ಕಾಂಗ್ರೆಸ್ ಶಾಸಕ ಪುಟ್ಟ ರಂಗ ಶೆಟ್ಟಿಗೆ ಬಹಳ ಹಿನ್ನಡೆ ಉಂಟು ಮಾಡಿತ್ತು. ನಂಜನಗೂಡು ಮತ್ತು ಗುಂಡ್ಲುಪೇಟೆ ನಗರ ಮುನಿಸಿಪಲ್ ಕೌನ್ಸಿಲ್ ನಲ್ಲಿ ಬಿಜೆಪಿ ತನ್ನ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದಿದೆ, ಸದ್ಯ ಬಿಜೆಪಿ ಆರು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹೊಂದಿದೆ. ಕಾಂಗ್ರೆಸ್ ಯಳಂದೂರು, ಟಿ ನರಸಿಪುರ ಮತ್ತು ಎಚ್.ಡಿ ಕೋಟೆಗೆ ಸೀಮಿತವಾಗಿದೆ, ಸ್ಥಳೀಯ ಅಭಿವೃದ್ಧಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಒಟ್ಟಾಗಿದೆ ಎಂದು ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಇದನ್ನೂ ಓದಿ :  ಈಶ್ವರಪ್ಪ ಮತ್ತೆ ಸಿಡಿಮಿಡಿ

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938