ನಿರ್ಣಯಕ್ಕೂ ಮೊದಲೇ ಮೇಲುಗೈ ಸಾಧಿಸಿದ ಬಿಜೆಪಿ! ; ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ಸೂಚಿಸಿದ ಜೆಡಿಎಸ್!

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಅವರು ಸದನವನ್ನು ಸರಿಯಾಗಿ ನಡೆಸಿಲ್ಲ. ಸಭಾಪತಿಗಳು ತಮ್ಮ ಮನಸ್ಸಿಗೆ ಬಂದಹಾಗೆ ಸದನ ನಡೆಸಬಾರದು. ಹೀಗಾಗಿ ಬಿಜೆಪಿ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ನೀಡಿದ್ದೇವೆ ಎಂದು ಪರಿಷತ್ ಸದಸ್ಯ, ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಹೇಳಿದರು. ಇಂದು ನಡೆಯಲಿರುವ ಒಂದು ದಿನದ ಕಲಾಪಕ್ಕೂ ಮುನ್ನ ಹೊರಟ್ಟಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಬಿಜೆಪಿ ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ತಮ್ಮ ಪಕ್ಷ ಬೆಂಬಲ ನೀಡಲಿದೆ ಎಂದರು. ಸದನದಲ್ಲಿ ನಡೆಯುತ್ತಿರುವ ವಿಷಯದಲ್ಲಿ ವಿಷಯಾಧಾರಿತವಾಗಿ ಬೆಂಬಲ ನೀಡಬೇಕಾಗುತ್ತದೆ.

ಅದರಿಂದ ವಿಷಯಾಧಾರಿತವಾಗಿ ಬಿಜೆಪಿಗೆ ಬೆಂಬಲ ನೀಡಿದ್ದೇವೆ. ಸದನದ ಹೊರಗಿನ ವಿಚಾರ ಬೇರೆ, ಸದನದ ಒಳಗಿನ ವಿಚಾರ ಬೇರೆ. ದೇವೇಗೌಡರು ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಒಪ್ಪಿದ್ದಾರೆಯೇ- ಇಲ್ಲವೊ ಗೊತ್ತಿಲ್ಲ ಸಭಾಪತಿ ಅವರು ಸದನವನ್ನು ಸರಿಯಾಗಿ ನಡೆಸಿಲ್ಲ ಎಂದರು. ಸಭಾಪತಿಯವರು ಸಂವಿಧಾನ ರೀತಿ ನಡೆದುಕೊಳ್ಳಬೇಕು. ಬಿಜೆಪಿಯವರು ಕೊಟ್ಟ ಪತ್ರ ಸರಿಯಿಲ್ಲ ಎಂದು ಹೇಳಬಾರದು. ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ ಮೇಲೆ ಅದರ ಮೇಲೆ ಚರ್ಚೆ ಮಾಡಿ ಇತಿಶ್ರೀ ಹಾಡಬೇಕು. ಸಭಾಪತಿಗಳು ತಮ್ಮ ಮನಸ್ಸಿಗೆ ಬಂದಹಾಗೆ ಸದನ ನಡೆಸಬಾರದು. ಹೀಗಾಗಿ ಬಿಜೆಪಿ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ನೀಡಿದ್ದೇವೆ ಎಂದು ಬಸವರಾಜ ಹೊರಟ್ಟಿ ಹೇಳಿದರು.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/