ಮುಂದಿನ ಜೂನ್‌ಗೆ ಸಿಹಿ ಸುದ್ದಿ ನೀಡಿದ ಯಡಿಯೂರಪ್ಪ



ಶಿವಮೊಗ್ಗ: ಶಿವಮೊಗ್ಗ, ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ನಡುವೆಯೂ ಬಿಡುಗಡೆಗೊಳಿಸಿ ಎಂದರು.

ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ಅನುದಾನ ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ನಿಲ್ದಾಣ ನಿರ್ಮಾಣದಿಂದ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಗತಿ ನಿರೀಕ್ಷಿಸಲಾಗಿದೆ. ಹೆಚ್ಚಿನ ಕೈಗಾರಿಕೆಗಳು ಪ್ರಾರಂಭವಾಗಿ ಉದ್ಯೋಗವಕಾಶ ಸೃಷ್ಟಿಯಾಗಲಿದೆ ಎಂದರು. ರನ್ ವೇ ಕಾಮಗಾರಿ, ಸಂಪರ್ಕ ರಸ್ತೆ, ಪೆರಿಮೀಟರ್ ರಸ್ತೆ ಕಾಮಗಾರಿ ಪ್ರಗತಿಯಲ್ಲಿವೆ.

ಕಾಂಪೌಂಡ್ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, 15,900 ಮೀಟರ್ ಪೈಕಿ 11,500 ಮೀಟರ್ ಕಾಂಪೌಂಡ್ ನಿರ್ಮಾಣ ಪೂರ್ಣಗೊಳಿಸಲಾಗಿದೆ ಎಂದರು. ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಅಶೋಕನಾಯ್ಕ, ಅರಗ ಜ್ಞಾನೇಂದ್ರ, ಎಸ್.ರುದೇಗೌಡ, ಆರ್ಯವೈಶ್ಯ ನಿಗಮ ಅಧ್ಯಕ್ಷ ಡಿ.ಎಸ್.ಅರುಣ್, ಮೇಯರ್‌ ಸುನಿತಾ ಅಣ್ಣಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್, ಡಿಸಿ ಕೆ.ಬಿ.ಶಿವಕುಮಾರ್‌ ಇದ್ದರು.