ಕೋವಿಡ್ ನಿಯಮ ಉಲ್ಲಂಘಿಸಿದಕ್ಕೆ ಕೈ ಪಾಳಯದ ನಾಯಕನಿಗೆ ದಂಡಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಗಾಳಿಗೆ ತುರಿದ ಪರಿಣಾಮ 10 ಸಾವಿರ ರೂಪಾಯಿ ದಂಡವನ್ನು ವಿಧಿಸಲಾಗಿದೆ. ಸಭೆಯಲ್ಲಿ ಸಾಮಾಜಿಕ ಅಂತರವಿರಲಿಲ್ಲ ಹಾಗೂ ಸರಿಯಾಗಿ ಮಾಸ್ಕ್ ಧರಿಸದೇ ಇರುವುದರಿಂದ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಘಟಕಕ್ಕೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ.

ಮೇ 31 ರಂದು ಸಾಯಂಕಾಲ ಹುಬ್ಬಳ್ಳಿಗೆ ಬಂದಿದ್ದ ಡಿಕೆ ಶಿವಕುಮಾರ್ ಅವರು ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆ ಕಾರ್ಯಕ್ರಮದಲ್ಲಿ ಅಂಬುಲೆನ್ಸ್, ಕೋವಿಡ್ ಸೇವಾ ವಾಹನ, ಆಕ್ಸಿಜನ್, ಕೊರೊನಾ ರೋಗದ ಹತೋಟಿಗಾಗಿ ಅವಶ್ಯವಿರುವ ಇತ್ಯಾದಿ ಸೌಲಭ್ಯಗಳಿಗೆ ಚಾಲನೆ ಕೊಟ್ಟಿದ್ದರು.

ಇದನ್ನೂ ಓದಿ :  ಸಿಎಂ ಬದಲಾವಣೆ : ಕೇವಲ ಹಾಸ್ಯದ ತುಣುಕು! ಇನ್ನೂ ಎರಡು ವರ್ಷಗಳ ಕಾಲ ರಾಜಾಹುಲಿಯೇ ಸಿಎಂ?

ಈ ಕಾರ್ಯಕ್ರಮದ ಸಂದರ್ಭದಲ್ಲಿ ಹೆಚ್ಚು ಜನಜಂಗುಳಿ ನೆರೆದಿತ್ತು. ಸಾಮಾಜಿಕ ಅಂತರ ಅರಿವಿಯಿರಲಿಲ್ಲ ಹಾಗೂ ಅನುಮತಿಯನ್ನು ಪಡೆಯದೇ ಬ್ಯಾನರ್, ಬಂಟಿಂಗ್ಸ್ ಗಳನ್ನು ಕಟ್ಟಿದ ಆರೋಪದ ಮೇಲೆ ಮಹಾನಗರ ಪಾಲಿಕೆಯಿಂದ 10 ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಈ ಹಿನ್ನಲೆಯಲ್ಲಿ ಪಾಲಿಕೆ ಪರಿಸರ ಎಂಜಿನಿಯರ್ ನಯನ ಪ್ರತಿಕ್ರಿಯಿಸಿ, ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ದಂಡ ವಿಧಿಸಿರುವುದಾಗಿ ತಿಳಿಸಿದ್ದಾರೆ.