ಒಂದು ಭಾರತ- ಎರಡು ರಾಷ್ಟ್ರ ಎನ್ನುವುದು ಕಾಂಗ್ರೆಸ್ ನೀತಿ:ಡಿಸಿಎಂ ಕಿಡಿಒಂದು ಭಾರತ- ಎರಡು ರಾಷ್ಟ್ರ ಎನ್ನುವುದು ಕಾಂಗ್ರೆಸ್ ನೀತಿ. ಒಂದೇ ಭಾರತ-ಒಂದೇ ದೇಶ ಎನ್ನುವುದು ಬಿಜೆಪಿಯ ನೀತಿ. ಈ ಕಾರಣಕ್ಕಾಗಿಯೇ ಜಮ್ಮು ಮತ್ತು ಕಾಶ್ಮೀರಕ್ಕಿದ್ದ 370ನೇ ವಿಧಿಯನ್ನು ತೆಗೆಯಲಾಯಿತು. ಈಗ ಕಾಶ್ಮೀರವೂ ಭಾರತದ ಅಂತರ್ಭಾಗ. ಕಾಂಗ್ರೆಸ್‍ಗೆ ಇಂಥ ಇಚ್ಛಾಶಕ್ತಿ ಇರಲಿಲ್ಲ ಎಂದು ಅವರು ಕಿಡಿಕಾರಿದರು.

ಈಶಾನ್ಯ ಭಾರತದಲ್ಲೂ ಸಮಸ್ಯೆಗಳ ಸರಮಾಲೆಯೇ ಇತ್ತು. ಬಾಂಗ್ಲಾ ಗಡಿಯಲ್ಲಿ ಒಳನುಸುಳುವಿಕೆ ಮಿತಿ ಮೀರಿತ್ತು. ಈಗ ಎಲ್ಲವೂ ನಿಂತಿದೆ. ರಾಷ್ಟ್ರದ ಹಿತಾಸಕ್ತಿಗೆ ಮಾರಕವಾಗುವ ಅಂಶಗಳನ್ನು ಇಟುಕೊಂಡೇ ಕಾಂಗ್ರೆಸ್ ರಾಜಕಾರಣ ಮಾಡುತ್ತಾ ಬಂದಿದೆ. ಇಂಥ ರಾಜಕೀಯ ಪ್ರವೃತ್ತಿಗೆ ಮೋದಿ ಅವರು ಇತಿಶ್ರೀ ಹಾಡುತ್ತಿದ್ದಾರೆ. ಇಷ್ಟು ಕಾಶ್ಮೀರ ಒಂದು ವಿಷಯವನ್ನಿಟ್ಟುಕೊಂಡು ಭಾರತದ ಮೇಲೆ ವಾಗ್ದಾಳಿ ನಡೆಸಲಾಗುತ್ತಿತ್ತು. ಈಗ ಜಗತ್ತಿಗೆ ಸತ್ಯದ ಅರಿವಾಗಿದೆ. ಆ ಹೆಗ್ಗಳಿಕೆ ಮೋದಿ ಅವರಿಗೆ ಸಲ್ಲಬೇಕು ಎಂದು ಡಿಸಿಎಂ ಹೇಳಿದರು

ಕೋವಿಡ್‍ನಿಂದಲೇ ಸ್ವಾವಲಂಬನೆಯತ್ತ:
ಕೋವಿಡ್ ಸಂಕಷ್ಟ ಭಾರತಕ್ಕೆ ಬಂದಾಗ ಅದನ್ನೇ ಅವಕಾಶ ಮಾಡಿಕೊಂಡ ಮೋದಿ ಅವರು ಆತ್ಮನಿರ್ಭರ ಭಾರತ ಪರಿಕಲ್ಪನೆ ಅಡಿ ಕೈಗಾರಿಕೆ, ಉತ್ಪಾದನೆ, ಉದ್ಯೋಗ ಸೃಷ್ಠಿಗೆ ಉತ್ತೇಜನ ನೀಡಿದರು. ಕೇವಲ ಒಂದು ಪಿಪಿಇ ಕಿಟ್, ಮಾತ್ರೆ, ಔಷಧಿ, ಸ್ಯಾನಿಟೈಸರ್ ವಿಷಯದಲ್ಲಿ ಪರ ದೇಶಗಳ ಮೇಲೆ ಅವಲಂಭಿತವಾಗುತ್ತಿದ್ದ ಭಾರತವು ಕೇವಲ ಒಂದೂವರೆ ವರ್ಷದಲ್ಲೇ ಸಂಪೂರ್ಣ ಸ್ವಾವಲಂಭನೆ ಸಾಧಿಸಿತು. ಲಸಿಕೆ ತಯಾರಿಕೆಯಲ್ಲಿ ಜಗತ್ತಿನ ಅಗ್ರಮಾನ್ಯ ದೇಶವಾಗಿ ಹೊರಹೊಮ್ಮಿತು. ಇದು ಭಾರತದ ಸಾಧನೆ ಎಂದು ಡಿಸಿಎಂ ಒತ್ತಿ ಹೇಳಿದರು.