ಡಿಕೆಸು ಕ್ಷೇತ್ರದಲ್ಲಿ ಬಿಜೆಪಿಯಿಂದ ಆಪರೇಷನ್! ; ಬಿಗ್ ಶಾಕ್ ನೀಡಿದ ಬಿಜೆಪಿ.ಕೆ.ಆರ್‌.ಪುರ: ಮಹದೇವಪುರ ಕ್ಷೇತ್ರದ ಗ್ರಾಮಾಂತರ ಮಂಡಲದ ಬೈರತಿ, ಕಣ್ಣೂರು, ದೊಡ್ಡಗುಬ್ಬಿ, ಬಂಡೆಹೊಸೂರು, ಬಿದರಹಳ್ಳಿ, ಬಿಳೆಶೀವಾಲಯ, ಕೋನದಾಸಪುರ ಸೇರಿದಂತೆ ವಿವಿಧ ಗ್ರಾಮಗಳ ನೂರಾರು ಅನ್ಯಪಕ್ಷದ ಮುಖಂಡರು ಸಚಿವ ಬಿ.ಎ.ಬಸವರಾಜ ಹಾಗೂ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ನಂತರ ಮಾತನಾಡಿದ ಸಚಿವ ಬಸವರಾಜು, ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯ ಆಡಳಿತ ವೈಖರಿ ಹಾಗೂ ಶಾಸಕ ಅರವಿಂದ ಲಿಂಬಾವಳಿ ಕ್ಷೇತ್ರದ ಜನತೆಗೆ ನೀಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಅನ್ಯ ಪಕ್ಷದ ಕಾರ್ಯಕರ್ತರು ಬಿಜೆಪಿಗೆ ಸೇರುತ್ತಿರುವುದು ಖುಷಿಯ ವಿಚಾರವಾಗಿದೆ ಎಂದರು. ಶಾಸಕ ಅರವಿಂದ ಲಿಂಬಾವಳಿ, ಮಹದೇವಪುರ ಕ್ಷೇತ್ರ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ನಟರಾಜ್‌, ರಾಮಾಂಜಿನೇಯ, ಚಿದಾನಂದ, ಕಣ್ಣೂರು ಅಶೋಕ್‌, ರಮೇಶ್‌, ಕೆಂಪೇಗೌಡ ಮತ್ತಿತರರು ಇದ್ದರು.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/