ಶಿರಾ ಚುನಾವಣೆಗೆ ಎಂಟ್ರಿ ಕೊಟ್ಟ ಈ ಲೀಡರ್ ; ಡಿಕೆಶಿ ಪ್ಲಾನ್ ಫ್ಲಾಪ್?!

ತುಮಕೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಶುಕ್ರವಾರ ಶಿರಾ ಉಪಚುನಾವಣೆ ಪ್ರಚಾರದ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಕೆಆರ್ ಪೇಟೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ವಿಜಯೇಂದ್ರ ಮಾಸ್ಟರ್ ಪ್ಲಾನ್ ವರ್ಕ್ ಔಟ್ ಆಗಿತ್ತು, ಹೀಗಾಗಿ ಶಿರಾದಲ್ಲೂ ಅದೇ ತಂತ್ರಗಾರಿಗೆ ಬಳಸಲು ಮುಂದಾಗಿದ್ದಾರೆ. ಶುಕ್ರವಾರ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ನಾಮಪತ್ರ ಸಲ್ಲಿಕೆ ವೇಳೆ ನಡೆದ ಮೆರವಣಿಗೆಯಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಮತ್ತು ಗೋವಿಂದ ಕಾರಜೋಳ ಜೊತೆ ವಿಜಯೇಂದ್ರ ಭಾಗವಹಿಸಿದ್ದರು. ನಾವು ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತೇವೆಯೇ ಹೊರತು ಜಾತಿ ಆಧಾರದ ಮೇಲಲ್ಲ, ಸ್ವಾತಂತ್ರ್ಯ ಬಂದ 70 ವರ್ಷದ ನಂತರ ಶಿರಾದಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ, ಇನ್ನೂ ಪ್ರಚಾರದ ಕೊನೆಯ ದಿನದವರೆಗೂ ಕ್ಷೇತ್ರದಲ್ಲೇ ಉಳಿಯಲು ವಿಜಯೇಂದ್ರ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಿರಾ ಕ್ಷೇತ್ರದಲ್ಲಿ ಮತದಾರರು ಅಭಿವೃದ್ಧಿಗೋಸ್ಕರ ಬದಲಾವಣೆ ಬಯಸಿದ್ದಾರೆ. ಹಾಗಾಗಿ ಈ ಬಾರಿ ಕ್ಷೇತ್ರದ ಜನತೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೆ ಎಂದರು. ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್‌ಗೌಡ ಅವರ ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ಸವಾಲವನ್ನು ಸ್ವೀಕರಿಸಲು ಬಿಜೆಪಿ ಸಿದ್ಧವಾಗಿದೆ. ನಾವು ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಯನ್ನು ಗೆಲ್ಲುತ್ತೇವೆ, ಯಾವುದೇ ಜಾತಿ ಆಧಾರದ ಮೇಲೆ ಚುನಾವಣೆ ಎದುರಿಸಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ :  ನಿಮ್ಮ ಬಳಿ ಈ 5 ರೂ. ನಾಣ್ಯ ಇದ್ದರೆ ‘ಲಕ್ಷಗಟ್ಟಲೆ’ ಸಿಗುತ್ತೆ, ಸಂಪೂರ್ಣ ಮಾಹಿತಿ ನೋಡಿ!

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800