ಯಡಿಯೂರಪ್ಪ ಇವರ ಮುಂದೆ ದುರ್ಬಲರಾಗಿದ್ದಾರೆ?! ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ!ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಮುಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದುರ್ಬಲರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಕಫ್ರ್ಯೂ ಜಾರಿಗೆ ತರುವಾಗ ಯಾವ ಮಂತ್ರಿಯ ಮಾತನ್ನು ಕೇಳಿಲ್ಲ. ಒಬ್ಬ ಸಚಿವ ಹೇಳಿದ ಎಂಬ ಕಾರಣಕ್ಕೆ ಯಡಿಯೂರಪ್ಪ ಸಹಿ ಮಾಡಿದ್ದರು. ಕೊನೆಗೆ ಅವರದೇ ಸರ್ಕಾರದ ಸಚಿವರು, ಪಕ್ಷದವರು ಟೀಕಿಸಿದರೆ ಎಂಬ ಕಾರಣಕ್ಕೆ ಹಿಂಪಡೆದಿದ್ದಾರೆ. ನಾವು ಹೇಳಿದ್ದೇವೆ ಎಂಬ ಕಾರಣಕ್ಕೆ ಹಿಂಪಡೆದಿಲ್ಲ ಎಂದು ಹೇಳಿದರು. ಕೊರೊನಾದಿಂದ ಕಳೆದ ಒಂದು ವರ್ಷದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯುವಕರು ಉದ್ಯೋಗ ಇಲ್ಲದೆ ಪರಿತಪ್ಪಿಸುತ್ತಿದ್ದಾರೆ. ಸರ್ಕಾರ ರಾತ್ರಿ 11ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕಫ್ರ್ಯೂ ಜಾರಿಗೆ ತಂದರೆ ಸೋಂಕು ಕಡಿಮೆಯಾಗುತ್ತದೆ ಎಂದು ಸಲಹೆ ನೀಡಿದ ತಜ್ಞರು ಯಾರು ? ಅವರ ಫೋಟೋ ಕೊಡಿ ಮನೆಯಲ್ಲಿ ಹಾಕಿಕೊಂಡು ದೇವರಪ್ಪಾ ಎಂದು ಪೂಜೆ ಮಾಡುತ್ತೇವೆ ಎಂದು ಮಾರ್ಮಿಕವಾಗಿ ಹೇಳಿದರು.

ಸುಧಾಕರ್ ಮತ್ತು ಯಡಿಯೂರಪ್ಪ ಅವರ ನಡುವೆ ಏನಿದಯೋ ಗೋತ್ತಿಲ್ಲ. ರಾತ್ರಿ ಕಫ್ರ್ಯೂ ಜಾರಿಗೊಳಿಸುವುದರಿಂದ ಕೊರೊನಾ ಸೋಂಕು ಹರಡುವುದಿಲ್ಲ ಎಂಬ ತೀರ್ಮಾನಕ್ಕೆ ಬರುವ ಮುನ್ನಾ ಸಾಮಾನ್ಯ ಜ್ಞಾನ ಬಳಸಬೇಕಿತ್ತು. ಸೋಂಕನ್ನು ನಿಯಂತ್ರಿಸಲು ಬೇರೆ ಬೇರೆ ಕ್ರಮಗಳಿವೆ. ಜನಸಂದಣಿಯನ್ನು ಕಡಿಮೆ ಮಾಡಬೇಕಿತ್ತು. ಜನರಿಗೆ ಸೂಕ್ತ ಚಿಕಿತ್ಸೆ ಮತ್ತು ಔಷಧಿಗಳನ್ನು ನೀಡಬೇಕು. ಅದನ್ನು ಬಿಟ್ಟು ಅವೈಜ್ಞಾನಿಕವಾಗಿ ಕಫ್ರ್ಯೂ ಜಾರಿಗೊಳಿಸುವ ಪ್ರಯತ್ನ ಮಾಡಿದ್ದು ಹಾಸ್ಯಾಸ್ಪದ ಎಂದರು. ಕೊರೊನಾದಿಂದಾಗಿ ಉದ್ಯಮಗಳು ಚೇತರಿಸಿಕೊಂಡಿಲ್ಲ. ಹೊಟೇಲ್, ರೆಸ್ಟೋರೆಂಟ್‍ಗಳಲ್ಲಿ ಶೇ.50ರಷ್ಟು ವ್ಯಾಪಾರ ನಡೆಯುತ್ತಿಲ್ಲ. ಹಾಗೆಂದು ಹೊಟೇಲ್ ಉದ್ಯಮಿಗಳಿಗೆ ಖರ್ಚುಗಳು ಕಡಿಮೆಯಾಗಿಲ್ಲ. ಸರ್ಕಾರ ಬಾಡಿಗೆ ಕಡಿಮೆ ಮಾಡಿಸಿಲ್ಲ. ಸಿಬ್ಬಂದಿಗಳ ವೇತನ, ವಿದ್ಯುತ್ ಬಿಲ್ ಯಾವುದು ಕಡಿಮೆಯಾಗಿಲ್ಲ. ಕನಿಷ್ಠ ಸರ್ಕಾರ ಸಾಲದ ಮೇಲಿನ ಬಡ್ಡಿಯನ್ನಾದರೂ ಕಡಿಮೆ ಮಾಡಿಲ್ಲ ಎಂದು ಅಸಮದಾನ ವ್ಯಕ್ತ ಪಡಿಸಿದರು.

ಇದನ್ನೂ ಓದಿ :  ಸಿಎಂ ಬದಲಾವಣೆ : ಕೇವಲ ಹಾಸ್ಯದ ತುಣುಕು! ಇನ್ನೂ ಎರಡು ವರ್ಷಗಳ ಕಾಲ ರಾಜಾಹುಲಿಯೇ ಸಿಎಂ?

ಈ ಸರ್ಕಾರ ಹಲವಾರು ಬಾರಿ ತನ್ನ ನಿರ್ಧಾರಗಳನ್ನು ಬದಲಾವಣೆ ಮಾಡಿಕೊಂಡು ಯು ಟರ್ನ್ ಹೊಡೆದಿದೆ. ಅದೇ ರೀತಿ ಈಗ ರಾತ್ರಿ ಕಫ್ರ್ಯೂವನ್ನು ವಾಪಾಸ್ ಪಡೆದಿದೆ ಎಂದು ಹೇಳಿದರು. ಈ ಹಿಂದೆ ಲಾಕ್‍ಡೌನ್ ಸಂದರ್ಭದಲ್ಲಿ ದೇಶದಲ್ಲಿ ಎಲ್ಲಾ ಸ್ವಿಮ್ಮಿಂಗ್ ಪೂಲ್‍ಗಳು ಮುಚ್ಚಿದ್ದವು. ಆದರೆ ಸಚಿವ ಡಾ.ಸುಧಾಕರ್ ಮಾತ್ರ ತಮ್ಮ ಈಜುಕೊಳದಲ್ಲಿ ಈಜುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅವರ ವಿರುದ್ಧ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಅನೇಕ ಸಚಿವರು ಜಾಮೀನಿನ ಮೇಲೆಯೇ ಹೊರಗಡೆ ಇದ್ದಾರೆ. ನನ್ನ ವಿಷಯವಾಗಿ ಮಾತನಾಡುವವರಿಗೆ ಮುಂದಿನ ದಿನಗಳಲ್ಲಿ ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದರು.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/