“ಉಪಚುನಾವಣೆಯಲ್ಲಿ ಬಿಜೆಪಿಯದ್ದೇ ಗೆಲುವು, ಡಿಕೆಶಿ ಯತ್ನ ವಿಫಲವಾಗಲಿದೆಯೇ!”

ಚಿತ್ರದುರ್ಗ: ಉಪ ಚುನಾವಣೆಯಲ್ಲಿ ಅನುಕಂಪ ಸೃಷ್ಟಿಸಿಕೊಂಡು ಗೆಲ್ಲುವ ಡಿಕೆ ಶಿವಕುಮಾರ್ ಯತ್ನ ವಿಫಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು. ಹಿರಿಯೂರಿನಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಚಿದಾನಂದ ಗೌಡ ಪರ ಮತಯಾಚನೆ ವೇಳೆ ಸುದ್ದಿಗಾರರ ಜತೆ ಮಾತನಾಡಿದರು. ನೀತಿ ಸಂಹಿತೆ ವಿಚಾರವಾಗಿ ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಲಿದೆ. ಸೇಡಿನ ರಾಜಕಾರಣವಿಲ್ಲ. ಆದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಲುವ ಹತಾಶೆಯಿಂದ ಆರೋಪ ಮಾಡುತ್ತಿದ್ದಾರೆ ಎಂದರು. ವಿಧಾನ ಪರಿಷತ್ ಹಾಗೂ ವಿಧಾನಸಭೆ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ಆಗ್ನೇಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಪತಿ ಶ್ರೀನಿವಾಸ್ ಸ್ಪರ್ಧೆ ಕುರಿತು ಪಕ್ಷದ ವರಿಷ್ಟರು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ವಿಚಾರವಾಗಿ ಸರ್ಕಾರದ ಹಂತದಲ್ಲಿ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ :  ನೆಲೆಯಿಲ್ಲದ ಕೆಸರಿನಲ್ಲಿ ಅರಳಿದ ಕಮಲ!? ; ಕಾಂಗ್ರೆಸ್ ಅದ್ಯಕ್ಷಗಿರಿಗೆ  ರಾಜಿನಾಮೆ!

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800