ಜೋರಾದ ಗ್ರಾಮ ಪಂಚಾಯತಿ ಚುಣಾವಣೆ ಬಿಸಿ ; ಗರಂ ಆದ ಚುನಾವಣಾ ಆಯೋಗ! ಕಾರಣ ಏನು ಗೊತ್ತಾ?!

ಬೆಂಗಳೂರು: ರಾಜ್ಯದಲ್ಲಿ ಇದೇ 22 ಮತ್ತು 27 ರಂದು ಎರಡು ಹಂತಗಳಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪ ಹೆಚ್ಚಾಗುತ್ತಿರುವುದನ್ನು ರಾಜ್ಯ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ಸತ್ ಸಂಪ್ರದಾಯಗಳನ್ನು ಗಾಳಿಗೆ ತೂರಿ ಪಕ್ಷದ ನೆಲೆಯಲ್ಲಿ ಸಭೆ, ಸಮಾರಂಭಗಳನ್ನು ನಡೆಸಿ ಗ್ರಾಮ ಪಂಚಾಯತಿ ಚುನಾವಣೆ(Election)ಯನ್ನು ರಾಜಕೀಯಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಗರಂ ಆಗಿದೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಬಾರದು, ರಾಜಕೀಯದಿಂದ ಪಂಚಾಯತಿ ಗಳನ್ನು ಮುಕ್ತಗೊಳಿಸಬೇಕು. ಇಂತಹ ಕಲುಷಿತ ವಾತಾವರಣವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವಂತೆ ರಾಜ್ಯ ಚುನಾವಣಾ ಆಯೋಗ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/