ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಗೊಂಡ ಕಾಂಗ್ರೆಸ್ ನ ಪ್ರಭಾವಿ ಮುಸ್ಲಿಂ ಸದಸ್ಯ ಸಿ.ಎಂ.ಇಬ್ರಾಹಿಂ! ; ಇಲ್ಲಿದೆ ಕಾರಣ.ಬೆಳಗಾವಿ: ಕಾಂಗ್ರೆಸ್ ಸಂಬಂಧವನ್ನೇ ಕಡಿದುಕೊಳ್ಳಲು ನಿರ್ಧರಿಸಿರುವ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ, ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಇಬ್ರಾಹಿಂ, ಜನರು ಕಾಂಗ್ರೆಸ್ ಪಕ್ಷವನ್ನು ಕೈ ಬಿಟ್ಟಿದ್ದಾರೆ. ಈ ಪಕ್ಷದ ಮುಖಂಡರು ಬೆಂಗಳೂರು- ದೆಹಲಿಯಲ್ಲಿ ಕುಳಿತು ಚರ್ಚೆ ಮಾಡ್ತಾರೆ. ಇದರಿಂದ ಕಾಂಗ್ರೆಸ್ ಜನರಿಂದ ದೂರವಾಗಿದೆ ಎಂದರು. ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮನ್ನು ತುಳಿಯಲಾಯಿತು(ಕಡೆಗಣಿಸುವಿಕೆ) ಎನ್ನಲಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಇಬ್ರಾಹಿಂ, ನನ್ನನ್ನು ತುಳಿಯಲು ನಾನು ಹಗುರವಾಗಿಲ್ಲ, 110 ಕೆಜಿ ಇರುವೆ. ಆದರೆ ಕಾಂಗ್ರೆಸ್ನಲ್ಲಿ ನನಗೆ ಪರದೆ ಹಾಕಿದ್ರು. ಹಾಗಾಗಿ ಅದರಿಂದ ಹೊರಗೆ ಬಂದೆ. ಸಿದ್ದರಾಮಯ್ಯ ನನ್ನ ಸ್ನೇಹಿತರು ಅವರ ಬಗ್ಗೆ ಏನೂ ಮಾತನಾಡಲ್ಲ. ಆದ್ರೆ ಮನೆ ಕಟ್ಟಿದವರು ಮನೆಯಲ್ಲಿ ಇರಲ್ಲ. ಮನೆ ಕಟ್ಟಿದವರಿಗೆ ಒಂದೆರೆಡು ಮೂಸಂಬಿ ಹಣ್ಣು ಕೊಟ್ಟು, ಶಾಲು ಹೊದಿಸಿ ಹೊರಗೆ ಹಾಕ್ತಾರೆ ಎನ್ನುವ ಮೂಲಕ ಪಕ್ಷ ಸಂಘಟನೆ ಮಾಡಿದ್ದಕ್ಕೆ ಬೆಲೆ ಸಿಗಲಿಲ್ಲ ಎಂದು ಪರೋಕ್ಷವಾಗಿ ಮಾತಿನಲ್ಲೇ ತಿವಿದರು. ಪ್ರಾದೇಶಿಕ ಪಕ್ಷದಿಂದ ಜನರ ಸಮಸ್ಯೆ ಪರಿಹಾರ ಮಾಡಿಕೊಳ್ಳಲು ಸಾಧ್ಯವಿದೆ. ದೇವೇಗೌಡ ಮತ್ತು ಕುಮಾರಸ್ವಾಮಿ ಇಬ್ಬರ ವ್ಯಕ್ತಿತ್ವವೂ ಒಂದೇ ಇದೆ.

ಇವರೆಲ್ಲರನ್ನೂ ಸಂಗಮ ಮಾಡಿ ಏನು ಮಾಡಲು ಸಾಧ್ಯವಿದೆ ಎಂಬುದರ ಬಗ್ಗೆ ನೋಡುತ್ತೇವೆ ಎಂದರು. ಬೆಳಗಾವಿಯಲ್ಲಿ ಹಳಬರು, ಹೊಸಬರ ಪರಿಚಯ ಮಾಡಿಕೊಂಡಿದ್ದೇನೆ. ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆ ಕೆಟ್ಟು ಹೋಗಿದೆ. ಹೀಗಾಗಿ ಎಲ್ಲ ಸಮುದಾಯದ ಮುಖಂಡರ ಜತೆಗೆ ಚರ್ಚೆ ಮಾಡಿರುವೆ. ಅವರಿಂದ ಒಳ್ಳೆಯ ಅಭಿಪ್ರಾಯ ಬಂದಿದೆ. ಮುಂದೆ ಒಂದು ರಾಜಕೀಯ ತೀರ್ಮಾನ ಮಾಡ್ತೀನಿ‌. ಕಾಂಗ್ರೆಸ್ ಮತ್ತು ಜೆಡಿಎಸ್​ ಯಥಾ ಪ್ರಕಾರ ನಡೆಯುತ್ತಿದೆ. ನಾನು ಬಿಜೆಪಿ ಸೇರಲ್ಲ. ಬದಲಾವಣೆಗೆ ಜನರು ಸ್ಪಂದಿಸಬೇಕು ಎನ್ನುವ ಮೂಲಕ ಕಾಂಗ್ರೆಸ್​ ತೊರೆದು ಜೆಡಿಎಸ್ ಸೇರುವ ಬಗ್ಗೆ ಸೂಚ್ಯವಾಗಿ ಹೇಳಿದರು. ಈ ಹಿಂದೆ ಜೆಡಿಎಸ್​ನಲ್ಲಿದ್ದ ಇಬ್ರಾಹಿಂ, ಸಿದ್ದರಾಮಯ್ಯರನ್ನ ಬೆಂಬಲಿಸಿ ಕಾಂಗ್ರೆಸ್ ಸೇರಿದ್ದರು, 2018ರ ಚುನಾವಣೆಯಲ್ಲೂ ಪರವಾಗಿ ರಾಜ್ಯ ಸುತ್ತಿದ್ದರು. ಇದೀಗ ವಿಧಾನಪರಿಷತ್ ಪ್ರತಿಪಕ್ಷ ಸ್ಥಾನದ ಆಯ್ಕೆ ಸಂದರ್ಭ ಸಿದ್ದರಾಮಯ್ಯ ತಮ್ಮ ಪರ ನಿಲ್ಲಲಿಲ್ಲ ಎಂದು ಮುನಿಸಿಕೊಂಡ ಅವರು ಜೆಡಿಎಸ್​ ಮನೆಗೆ ಎಂಟ್ರಿ ಕೊಡುತ್ತಿದ್ದಾರೆ. ಈ ಗಾಗಲೇ ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡ ಮತ್ತು ಎಚ್​.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆಯನ್ನೂ ನಡೆಸಿದ್ದಾರೆ. ‘ನಾನು ಮತ್ತು ದೇವೇಗೌಡರು ತಂದೆ-ಮಗ ಇದ್ದಂತೆ. ತಂದೆ ಎಂದಾದರೂ‌ ಮಗನಿಗೆ ಬೇಡ ಅಂತಾರಾ?’ ಎಂದೂ ಹೇಳಿದ್ದರು.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/