ಸಿಎಂ ಕುರ್ಚಿಖಾಲಿಯಿಲ್ಲ ಕಾಂಗ್ರೆಸ್‌ನ ತಿರುಕನ ಕನಸು:ಕಾರಜೋಳಬೆಳಗಾವಿ:ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಯೇ ಖಾಲಿ ಇಲ್ಲ; ಹಾಗಿದ್ದರೂ ಕಾಂಗ್ರೆಸ್‌ನವರು ತಿರುಕನ ಕಾಣುತ್ತಿದ್ದಾರೆಂದು ಡಿಸಿಎಂ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಗೋವಿಂದ ಕಾರಜೋಳ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಷ್ಟಕ್ಕೂ ಇವರು ಗೆದ್ದು ಬರಬೇಕು. ಗೆದ್ದು ಬಂದ ನಂತರ ಒಂದಾಗಬೇಕು .

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಖರ್ಗೆ ಪರಮೇಶ್ವರ ಸೇರಿ ಮೂರು ಪ್ರಬಲ ಗುಂಪುಗಳಿವೆ. ಶಾಮನೂರು ಶಿವಶಂಕರಪ್ಪ ಅವರು ನನಗೂ 91 ವಯಸ್ಸಾಗಿದೆ. ನಾನ್ಯಾಕೆ ಮುಖ್ಯಮಂತ್ರಿ ಆಗಬಾರದು ಎನ್ನುತ್ತಾರೆ. ಹೀಗಾಗಿ ಇವರದ್ದು ತಿರುಕನ ಕನಸು, ನನಸಾಗಲು ಸಾಧ್ಯವೇ ಇಲ್ಲ. ಕಾಂಗ್ರೆಸ್‌ನ ಸ್ಥಿತಿ ಇನ್ನಷ್ಟು ಹೀನಾಯವಾಗಲಿ ಎಂದರು.

ರಮೇಶ ಜಾರಕಿಹೊಳಿ ರಾಜೀನಾಮೆ ನೀಡಲು ಮುಂದಾಗಿದ್ದಾರಂತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ, ಅದರ ಬಗ್ಗೆ ನನಗೇನೂ ಗೊತ್ತಿಲ್ಲ. ಈ ಬಗ್ಗೆ ನಾನೇನೂ ಮಾತಾಡುವ ಪರಿಸ್ಥಿತಿಯಲ್ಲಿಲ್ಲ. ಕಾರಣ ನನಗೆ ರಮೇಶ ಜಾರಕಿಹೊಳಿ ಸಂಪರ್ಕಕ್ಕೆ ಬಂದಿಲ್ಲ ಎಂದರು. ಸಿಎಂ ಬದಲಾವಣೆ ಬಗ್ಗೆ ಕೇಂದ್ರ ಸರ್ಕಾರದ ಮುಂದೆ ಯಾವುದೇ ಅಜಂಡಾ ಇಲ್ಲ. ಪೂರ್ಣಾವಧಿಗೆ ಯಡಿಯೂರಪ್ಪ ನವರೇ ಮುಖ್ಯಮಂತ್ರಿಯಾಗಿ ಮುಂದುವರೆ ಯಲಿದ್ದಾರೆಂದು ಸ್ಪಷ್ಟಪಡಿಸಿದರು.