ಕೆಎಸ್‌ಆರ್‌ಟಿಸಿ ಬಳಕೆಗೆ ನಿಷೇಧವಿಲ್ಲ?



ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ “ಕೆಎಸ್‌ಆರ್‌ಟಿಸಿ” ಎಂದು ಬಳಸುವಂತಿಲ್ಲವೆಂದು ಆದೇಶ ಹೊರಡಿಸಿಲ್ಲ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಸ್ಪಷ್ಟನೆ ನೀಡಿದ್ದಾರೆ. ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿರವರು ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಕೆಎಸ್‌ಆರ್‌ಟಿಸಿ ಸಂಸ್ಥೆ ಸಂಸ್ಥೆಯು ಕೇಂದ್ರ ಟ್ರೇಡ್ ಮಾರ್ಕ್ ರಿಜಿಸ್ಟರಿ ರವರಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶವನ್ನು ಇಂದಿನವರೆಗೂ ಸ್ವೀಕರಿಸಿರುವುದಿಲ್ಲ ಎಂದಿದ್ದಾರೆ.

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆ ಎಸ್ ಆರ್ ಟಿಸಿಗೆ ನೀಡಲಾದ ಟ್ರೇಡ್‌ ಮಾರ್ಕ್ ಪ್ರಮಾಣಪತ್ರದ ವಿರುದ್ಧ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಹೊರಡಿಸಲಾಗಿಲ್ಲ. ಸದರಿ ಮಂಡಳಿಯನ್ನು ಏಪ್ರಿಲ್ 4 ರಂದು ಕೇಂದ್ರ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ. ಮತ್ತು ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ, ಕೆಎಸ್‌ಆರ್‌ಟಿಸಿ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಮತ್ತು ನೀಡಲಾಗಿರುವ ಟ್ರೇಡ್‌ಮಾರ್ಕ್‌ಗಳನ್ನು ಬಳಸಲಾಗುವುದಿಲ್ಲ ಎಂಬ ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು. ಸುದ್ದಿ-ವರದಿಗಳು ಸತ್ಯಕ್ಕೆ ದೂರವಾಗಿದೆ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್‌ಆರ್‌ಟಿಸಿ’ ಟ್ರೇಡ್‌ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಆದೇಶ ಮತ್ತು ನಿಷೇಧವಿರುವುದಿಲ್ಲ.

ಇದನ್ನೂ ಓದಿ :  ಘರ್ಜಿಸಿದ ಯಡಿಯೂರಪ್ಪ

ಕೇರಳ ಎಸ್‌ಆರ್‌ಟಿಸಿಯು, ಕರ್ನಾಟಕ ಸರ್ಕಾರಕ್ಕೆ ಮಾಧ್ಯಮಗಳಲ್ಲಿನ ಸುದ್ದಿ ಪ್ರಕಟವಾಗಿದೆ. ಒಂದು ನೀಡಲು ಉದ್ದೇಶಿಸಿದೆ ಎಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡಲಾಗುತ್ತದೆ. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ವಕೀಲರನ್ನು ಸಂಪರ್ಕಿಸಿದ್ದೇವೆ’ ಎಂದಿದ್ದಾರೆ.