BIG BREAKING: ಲವ್ ಜಿಹಾದ್ ವಿರುದ್ಧ ಸುಗ್ರೀವಾಜ್ಞೆ ಹೊರಡಿಸಿದ ಉತ್ತರಪ್ರದೇಶದ ಯೋಗಿ ಸರ್ಕಾರ!

ಉತ್ತರಪ್ರದೇಶ: ಬಲವಂತದ ಮತಾಂತರ ವಿರುದ್ಧ ಸುಗ್ರೀವಾಜ್ಞೆ ತರಲು ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮುಂದಾಗಿದೆ. ಈ ಸಂಬಂಧ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಪ್ರಕಾರ ಬಲವಂತವಾಗಿ ಒಂದು ಧರ್ಮದವರನ್ನ ಮತ್ತೊಂದು ಧರ್ಮಕ್ಕೆ ಮತಾಂತರ ಮಾಡಿದ್ರೆ ಅಂಥವರಿಗೆ 1ರಿಂದ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 15,000 ರೂಪಾಯಿ ದಂಡ ವಿಧಿಸಲು ಅವಕಾಶವಿದೆ. ಅದ್ರಲ್ಲೂ ಅಪ್ರಾಪ್ತರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳೆಯರನ್ನ ಮತಾಂತರ ಮಾಡಿದ್ರೆ 3ರಿಂದ 10 ವರ್ಷ ಜೈಲು ಶಿಕ್ಷೆ ಮತ್ತು 25,000 ರೂಪಾಯಿ ದಂಡ ವಿಧಿಸಲು ಅವಕಾಶವಿದೆ.

ಇನ್ನು ಸಾಮೂಹಿಕವಾಗಿ ಜನರನ್ನ ಮತಾಂತರ ಮಾಡಿದ್ರೆ ಅಂಥವರಿಗೆ 3ರಿಂದ 10 ವರ್ಷ ಜೈಲು ಮತ್ತು 50,000 ದಂಡ ವಿಧಿಸಬಹುದಾಗಿದೆ. ಜೊತೆಗೆ ಯಾವುದಾದರು ವ್ಯಕ್ತಿಯನ್ನು ಮತಾಂತರ ಮಾಡಿ ಮದುವೆ ಮಾಡಿಕೊಳ್ಳಬೇಕು ಅಂತಿದ್ರೆ ಆಗ ಮದುವೆಗೂ 2 ತಿಂಗಳು ಮುಂಚಿತವಾಗಿ ಜಿಲ್ಲಾಧಿಕಾರಿಗಳಿಂದ ಇದಕ್ಕೆ ಅನುಮತಿ ಪಡೆಯಬೇಕು ಅಂತ ತಿಳಿಸಲಾಗಿದೆ. ಕರ್ನಾಟಕ, ಮಧ್ಯಪ್ರದೇಶ ಮುಂತಾದ ಬಿಜೆಪಿ ಆಡಳಿತವಿರುವ ರಾಜ್ಯಗಳು ಲವ್ ಜಿಹಾದ್ ತಡೆಯಲು ಕಠಿಣ ಕಾನೂನು ತರಲು ಚಿಂತಿಸುತ್ತಿವೆ. ಇಂತಹ ಸಂದರ್ಭದಲ್ಲೇ ಉತ್ತರಪ್ರದೇಶ ಸರ್ಕಾರ ಮತಾಂತರ ವಿರುದ್ಧ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಿದೆ.

ಕಾನೂನುಬಾಹಿರ ಧರ್ಮ ಪರಿವರ್ತನೆಯಾ ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ ಮಾತನಾಡಿರುವ ಯೋಗಿ ಸರ್ಕಾರದ ಕ್ಯಾಬಿನೆಟ್ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್, ಉತ್ತರಪ್ರದೇಶದ ಕ್ಯಾಬಿನೆಟ್ ಇಂದು ‘ಧಾರ್ಮಿಕ ಮತಾಂತರ ನಿಷೇಧದ ಸುಗ್ರೀವಾಜ್ಞೆ 2020 ‘ಜಾರಿಗೆ ತಂದಿದೆ. ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಾಮಾನ್ಯವಾಗಿಸಲು ಮತ್ತು ಮಹಿಳೆಯರಿಗೆ ನ್ಯಾಯ ಒದಗಿಸಲು ಇದು ಅವಶ್ಯಕವಾಗಿದೆ ಎಂದು ಅವರು ಹೇಳಿದ್ದಾರೆ. ‘ಈ ಹಿಂದೆ 100 ಕ್ಕೂ ಹೆಚ್ಚು ಘಟನೆಗಳು ನಡೆದಿವೆ, ಅದರಲ್ಲಿ ಧರ್ಮವನ್ನು ಮತಾಂತರ ಮಾಡಲಾಗುತ್ತಿದೆ. ಮೋಸ, ವಂಚನೆಯ ಮೂಲಕ ಧರ್ಮವನ್ನು ಪರಿವರ್ತಿಸಲಾಗುತ್ತಿದೆ. ಈ ಕುರಿತು ಕಾನೂನಿನಲ್ಲಿ ಅಗತ್ಯವಾದ ನೀತಿಯನ್ನು ರೂಪಿಸಲಾಗಿದ್ದು, ಅದರ ಮೇಲೆ ನ್ಯಾಯಾಲಯದ ಆದೇಶಗಳು ಬಂದಿವೆ ಮತ್ತು ಇಂದು ಯೋಗಿಯ ಕ್ಯಾಬಿನೆಟ್ ಕೂಡ ಸುಗ್ರೀವಾಜ್ಞೆಯನ್ನು ತಂದಿದೆ’ ಎಂದು ಅವರು ಹೇಳಿದ್ದಾರೆ.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/