ಯೋಗದಿನದ ಬಗ್ಗೆ ಪ್ರಧಾನಿ ಹೇಳಿದ್ದೇನು



ಇಡೀ ಜಗತ್ತು ಇಂದು ಕೋವಿಡ್-19 ವಿರುದ್ಧ ಹೋರಾಡುತ್ತಿರುವಾಗ ಯೋಗ ನಮ್ಮ ಜೀವನದಲ್ಲಿ ಭರವಸೆಯ ಆಶಾಕಿರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದು 7ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದಲ್ಲಿ ಕೊರೋನಾ ವೈರಸ್ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ವರ್ಷಗಳಿಂದ ಯಾವುದೇ ಸಾರ್ವಜನಿಕ ಸಭೆ, ಸಮಾರಂಭ-ಕಾರ್ಯಕ್ರಮಗಳು ನಡೆದಿಲ್ಲ. ಆದರೂ ಜನರಲ್ಲಿ ಯೋಗದ ಬಗ್ಗೆ ಇರುವ ಉತ್ಸಾಹ, ಆಸಕ್ತಿ ಇನ್ನೂ ಕಡಿಮೆಯಾಗಿಲ್ಲ ಎಂದರು.

ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಯೋಗವನ್ನು ರಕ್ಷಾಕವಚವಾಗಿ ಬಳಸಿದ್ದಾರೆ. ಕೊರೋನಾ ಚಿಕಿತ್ಸೆಯ ನಡುವೆ ಇಂದು ಆಸ್ಪತ್ರೆಗಳಲ್ಲಿ ವೈದ್ಯರು, ದಾದಿಯರು ಯೋಗವನ್ನು ಕಲಿಸುತ್ತಿದ್ದಾರೆ. ಈ ವ್ಯಾಯಾಮಗಳು ಉಸಿರಾಟದ ವ್ಯವಸ್ಥೆಯನ್ನು ಬಲಪಡಿಸುತ್ತವೆ ಅಂತ ಪ್ರಧಾನಿ ಹೇಳಿದರು.