ನಮ್ಮ ಪಕ್ಷ ಮುಂದಿನ ಬಾರಿ ಅಧಿಕಾರಕ್ಕೆ ಬರುವುದಿಲ್ಲ: ಕುಟುಕಿದ ಶಾಸಕಮುಂಬರುವ 2024ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಜೆಡಿಎಸ್ ಪಕ್ಷವು 120 ಸ್ಥಾನಗಳನ್ನು ಗೆಲ್ಲುವುದಿಲ್ಲ, ನಮ್ಮ ಪಕ್ಷದ ನಾಯಕರು ಮುಖ್ಯಮಂತ್ರಿಯೂ ಆಗುವುದಿಲ್ಲ ಎಂದು ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಸ್ವಪಕ್ಷದ ವಿರುದ್ಧವೇ ಹೇಳಿಕೆ ಕೊಟ್ಟಿದ್ದಾರೆ

ಗುಬ್ಬಿ ತಾಲೂಕಿನ ಎಂ.ಎಚ್ ಪಟ್ಟಣ ಗ್ರಾಮ ಪಂಚಾಯಿತಿ ಆವರಣದಲ್ಲಿ ಕೃಷಿ ಇಲಾಖೆಯ ಮಾಹಿತಿ ರಥಕ್ಕೆ ಚಾಲನೆ ನೀಡಿ ಅಮಾತನಾಡಿದ ಅವರು, ನಮ್ಮ ಜೆಡಿಎಸ್ ಪಕ್ಷದಲ್ಲಿ ಇನ್ನೇನು ಮಾತನಾಡುವ ಹಾಗಿಲ್ಲ. ನಾವು ಮುಖ್ಯಮಂತ್ರಿ ಆಗೋದಿಲ್ಲ. ಜೆಡಿಎಸ್ 125 ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಸ್ವಪಕ್ಷದ ಬಗ್ಗೆಯೇ ಮಾತನಾಡಿದರು.

ಕಾಂಗ್ರೆಸ್ ಪಕ್ಷದವರು ಸಿಎಂ ಕುರ್ಚಿ ಬಗ್ಗೆ ಯಾಕೆ ಮಾತನಾಡುತ್ತಾರೋ ತಿಳಿಯುತ್ತಿಲ್ಲ. ಕಾಂಗ್ರೆಸ್ ಪಕ್ಷವು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 120 ಸ್ಥಾನಗಳನ್ನು ಗೆದ್ದಾಗ ಮಾತ್ರ ಸಿಎಂ ಕುಸ್ತಿ ಬಗ್ಗೆ ಚಿಂತನೆ ಮಾಡಬೇಕು. ಅದನ್ನು ಬಿಟ್ಟು ಪ್ರಚಾರಕ್ಕೆ ಮಾತನಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿ ಕಾರಿದ್ದಾರೆ.