ಕಾಂಗ್ರೆಸ್ ವಿರುದ್ಧ ಗುಡುಗಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ!ಧಾರವಾಡ: ಮಹದಾಯಿ ವಿಷಯದಲ್ಲಿ ಕಾಂಗ್ರೆಸ್‌ನ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಮಾಡಿದ್ದನ್ನೇ ಪಕ್ಷದ ಉಳಿದ ನಾಯಕರು ಮಾಡುತ್ತಾರೆ. ಕಾಂಗ್ರೆಸ್‌ ನಾಯಕರು ಕರ್ನಾಟಕದಲ್ಲಿದ್ದಾಗ ಒಂದು ರೀತಿ, ಗೋವಾದಲ್ಲಿ ಒಂದು ರೀತಿ ರೂಪ ತಾಳುವ ಸ್ವಭಾವದವರು. ಇವರು ಒಂದು ರೀತಿ ಬಣ್ಣ ಬದಲಿಸುವ ಊಸರವಳ್ಳಿ ಇದ್ದಂತೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದ್ದಾರೆ. ಭಾನುವಾರ ಇಲ್ಲಿ ದಿನೇಶ ಗುಂಡೂರಾವ್‌ ಮಹದಾಯಿ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಗೋವಾ ಚುನಾವಣೆ ಸಂದರ್ಭದಲ್ಲಿ ಮಹದಾಯಿ ವಿಚಾರವಾಗಿ ಮಾತನಾಡಿದ್ದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಕರ್ನಾಟಕಕ್ಕೆ ಒಂದು ಹನಿ ನೀರನ್ನೂ ನೀಡುವುದಿಲ್ಲ ಎಂದು ಹೇಳಿದ್ದರು.

ಇದೀಗ ಆ ಪಕ್ಷದ ರಾಜ್ಯ ಮುಖಂಡರು ತಮ್ಮ ನಾಯಕಿ ಮಾತಿನಂತೆ ನಡೆಯುವ ಮೂಲಕ ರಾಜ್ಯಕ್ಕೆ ದ್ರೋಹ ಮಾಡುವ ಹೇಳಿಕೆ ನೀಡಿದ್ದಾರೆ. ಈ ಕುರಿತು ಹೆಚ್ಚು ಹೇಳುವುದರಲ್ಲಿ ಅರ್ಥವಿಲ್ಲ ಎಂದು ತಿಳಿಸಿದ್ದಾರೆ. ಈಗಿನ ಕಾಂಗ್ರೆಸ್‌ ಡುಬ್ಲಿಕೇಟ್‌, ಗಾಂಧೀಜಿ ಕಾಂಗ್ರೆಸ್‌ ಒರಿಜಿನಲ್‌ ಎಂದು ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ, ಮಹದಾಯಿ ವಿಚಾರದಲ್ಲಿ ಗೋವಾ ಕಾಂಗ್ರೆಸ್‌ ನಿರ್ಣಯಕ್ಕೆ ದಿನೇಶ್‌ ಗುಂಡೂರಾವ್‌ ಅವರು ಬೆಂಬಲರಾಗಿರುತ್ತಾರೆ ಎಂದು ಗೋವಾ ಕಾಂಗ್ರೆಸ್‌ ಪಕ್ಷದ ನಾಯಕ ದಿಗಂಬರ್‌ ಕಾಮತ್‌ ಹೇಳಿಕೆ ನೀಡಿದ್ದರು. ಹೀಗಾಗಿ ಬಿಜೆಪಿ ನಾಯಕರು ಗುಂಡೂರಾವ್‌ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :  ಯಡಿಯೂರಪ್ಪ ಇಲ್ಲಾಂದ್ರೆ ಬಿಜೆಪಿ ಇಲ್ಲ, ಬಿಜೆಪಿ ಇಲ್ಲಾಂದ್ರೆ ಯಡಿಯೂರಪ್ಪ ಇಲ್ಲ:ಕಾಂಗ್ರೆಸ್ ಶಾಸಕ

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938