ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ ಪ್ರತಾಪ್ ಸಿಂಹ !ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಸಂಸದ ಪ್ರತಾಪ್ ಸಿಂಹ ಆಗಾಗ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದರು. ಆದ್ರೆ, ಇದೀಗ ಪ್ರತಾಪ್ ಸಿಂಹ ಅವರು ದಿಢೀರ್ ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಇಂದು (ಶುಕ್ರವಾರ) ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಬಿಜೆಪಿ ಮಾಡಿರುವ ಒಳ್ಳೆಯ ಕೆಲಸವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲಿಸಿದ್ದಾರೆ. ರಾಜಕೀಯ ಕಾರಣಕ್ಕೆ ಅವರನ್ನು ಟೀಕಿಸುವುದು ಸಣ್ಣತನ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಅಚ್ಚರಿ ಹೇಳಿಕೆ ನೀಡಿದರು. ರೈತರ ಸಾಲ ಮನ್ನಾದಂತಹ ರೈತ ಪರ ಕಾರ್ಯಕ್ರಮ ನೀಡಿದ್ದಾರೆ, ಅವರೊಬ್ಬ ರೈತನ ಮಗ.

ಹೀಗಾಗಿ, ರೈತರು ಹಾಗೂ ಗೋವಿನ ಬಗ್ಗೆ ಅವರಿಗೆ ಗೊತ್ತಿದೆ. ಇದೇ ಕಾರಣಕ್ಕೆ ಅವರು ಬಿಜೆಪಿಯ ಗೋಹತ್ಯೆ ನಿಷೇಧ ಕಾಯ್ದೆಯನ್ನು ಬೆಂಬಲಿಸಿದ್ದಾರೆ. ಅವರನ್ನು ಟೀಕೆ ಮಾಡುವುದು ಸರಿಯಲ್ಲ ಎಂದು ಎಚ್.ಡಿ ಕುಮಾರಸ್ವಾಮಿಯವರ ನಿಲುವನ್ನು ಬೆಂಬಲಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಬಿಜೆಪಿ ಹಾಗೂ ಜೆಡಿಎಸ್ ಸಮ್ಮಿಶ್ರ 20-20 ಸರ್ಕಾರದಲ್ಲಿಯೂ ಉತ್ತಮ ಕೆಲಸ ಮಾಡಿದ್ದಾರೆ. ಅವರಿಗೆ ಕೃಷಿ ಹಾಗೂ ಗೋವಿನ ಬಗ್ಗೆ ಚೆನ್ನಾಗಿ ಗೊತ್ತಿದೆ ಎಂದು ಪ್ರತಾಪ್ ಸಿಂಹ ಅವರು ಕುಮಾರಸ್ವಾಮಿ ಅವರನ್ನ ಗುಣಗಾನ ಮಾಡಿದರು. ಇನ್ನು ಶಿರಾ ಉಪಚುನಾವಣೆಯಲ್ಲಿ ಕ್ಷೇತ್ರದ ಜನರು ವಿಷ ಕೊಟ್ಟರು ಎಂದು ಕುಮಾರಸ್ವಾಮಿ ಅವರ ಹೇಳಿಕೆಗೆ ವ್ಯಂಗ್ಯವಾಡಿನ್ನು ಇಲ್ಲಿ ಸ್ಮರಿಸಬಹುದು.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/