‘ಬಾದಾಮಿಯಲ್ಲೂ ಸಿದ್ಧರಾಮಯ್ಯ ರವರಿಗೆ ಸೋಲು ಕಟ್ಟಿಟ್ಟ ಬುತ್ತಿ’ ; ರಾಮುಲು ಭವಿಷ್ಯ!ಗುಳೇದಗುಡ್ಡ: ಚಾಮುಂಡೇಶ್ವರಿ ಕ್ಷೇತ್ರದಂತೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಲುವುದು ಖಚಿತ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ. ಗುರುವಾರ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಬಿಜೆಪಿ ಕಾರ್ಯಕರ್ತರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿದ್ದಾಗಲೇ ಸಿದ್ದರಾಮಯ್ಯ ಅಸ್ತಿತ್ವ ಉಳಿಸಿಕೊಳ್ಳಲಿಲ್ಲ. ಬಾದಾಮಿಯಲ್ಲಿ ನಾನು ಮತ್ತೆ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದರು.

ಸಿದ್ದರಾಮಯ್ಯ ಅವರು ಜೆಡಿಎಸ್‌ನಿಂದ ಉಪಮುಖ್ಯಮಂತ್ರಿಯಾದರು. ಅಲ್ಲಿ ಪಕ್ಷವನ್ನು ಬೈದುಕೊಂಡೇ ದೊಡ್ಡವರಾದವರು. ಈಗ ಕಾಂಗ್ರೆಸ್ಸಿನಲ್ಲಿ ಅದನ್ನೇ ಮಾಡುತ್ತಿದ್ದಾರೆ. ತಮ್ಮ ಸೋಲಿಗೆ ಕೆಲ ಸ್ವಪಕ್ಷಿಯರೇ ಕಾರಣ ಎಂದು ಹೇಳುತ್ತಿದ್ದಾರೆ. ಒಮ್ಮೆ ಹಾಗಾದರೆ ಅವರು ಕಾಂಗ್ರೆಸ್‌ ಬಿಟ್ಟು ಹೊರಬರಬೇಕಿತ್ತು ಯಾಕೆ ಬರಲಿಲ್ಲ ಎಂದು ಪ್ರಶ್ನಿಸಿದರು. ಇದೆ ವೇಳೆ ಸಿದ್ದರಾಮಯ್ಯ ಅವರು ಕೊಡಗಿನ ಜನರು ಗೋಮಾಂಸ ತಿನ್ನುತ್ತಾರೆ ಎಂದಿರುವ ಕುರಿತು ಮಾತನಾಡಿದ ಅವರು, ಅವರ ಈ ಹೇಳಿಕೆಗೆ ಸಾಕಷ್ಟು ವಿರೋಧವಿದೆ. ಸಿದ್ದರಾಮಯ್ಯ ಅವರು ಕೊಡಗಿನ ಜನರ ಕ್ಷಮೆಯಾಚಿಸಬೇಕು ಎಂದು ಹೇಳಿದರು.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/