ಜೆಡಿಎಸ್ ನವರ ಮೇಲೆಯೇ ಕೇಸ್ ಹಾಕ್ತೀನಿ ಎಂದು ಗುಡುಗಿದ ರೇವಣ್ಣ ! ; ಕಾರಣ ಏನು ಗೊತ್ತಾ?!

ಹಾಸನ: ಈ ಬಾರಿಯ ತನ್ನ ಹುಟ್ಟುಹಬ್ಬಕ್ಕೆ ಯಾರಾದರೂ ರಸ್ತೆಬದಿ ಫ್ಲೆಕ್ಸ್‌, ಬ್ಯಾನರ್‌ ಹಾಕಿಸಿದ್ರೆ ಕೇಸ್‌ ಹಾಕಿಸ್ತೀನಿ. ಜನರು ಕೊರೋನಾದಿಂದಾಗಿ ಸಂಕಷ್ಟದಲ್ಲಿದ್ದಾರೆ. ಹಾಗಾಗಿ ವಿಜೃಂಭಣೆ ಬೇಡ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ತಮ್ಮ ಕಾರ್ಯಕರ್ತರಿಗೆ ಖಡಕ್‌ ಸೂಚನೆ ನೀಡಿದ್ದಾರೆ. ಇದೇ ಡಿ.17ಕ್ಕೆ ಎಚ್‌.ಡಿ.ರೇವಣ್ಣ ಅವರ 63ನೇ ಹುಟ್ಟುಹಬ್ಬ ಇದೆ. ಪ್ರತಿ ವರ್ಷ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಶುಭಾಶಯ ಕೋರುವ ಫ್ಲೆಕ್ಸ್‌ ಹಾಗೂ ಬ್ಯಾನರ್‌ಗಳನ್ನು ಹಾಕಿಸುತ್ತಿದ್ದರು.

ಆದರೆ, ಈ ಬಾರಿ ಕೊರೋನಾದಿಂದ ಜನರು ಸಂಕಷ್ಟದಲ್ಲಿರುವುದರಿಂದ ಹುಟ್ಟುಹಬ್ಬದ ವಿಜೃಂಭಣೆ ಬೇಡ ಎಂದು ರೇವಣ್ಣ ತಿಳಿಸಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಉಪ ಸಭಾಪತಿಯನ್ನು ಕಾಂಗ್ರೆಸ್‌ ಸದಸ್ಯರು ಎಳೆದಾಡಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ರೇವಣ್ಣ, ‘ಕಾಂಗ್ರೆಸ್, ಬಿಜೆಪಿ ಶಾಸಕರು ನಡೆದುಕೊಳ್ಳುತ್ತಿರುವ ರೀತಿಯನ್ನು ರಾಜ್ಯದ ಜನರೇ ನೋಡಿ ತೀರ್ಮಾನ ಕೈಗೊಳ್ಳುತ್ತಾರೆ. ಹಾಲಿ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ಇಲ್ಲದ ಮೇಲೆ ಕುರ್ಚಿಯಲ್ಲಿ ಕೂರಲು ಬಿಡಬಾರದಿತ್ತು’ ಎಂದು ಅಭಿಪ್ರಾಯಪಟ್ಟರು.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/