ರೈತರ ಪ್ರತಿಭಟನೆಯ ನಡುವೆಯೂ ಸದ್ದು ಮಾಡಿದ ಶಿವಸೇನೆ ನಾಯಕನ ಈ ಸರ್ಜಿಕಲ್ ಸ್ಪೈಕ್!



ಮುಂಬೈ: ಪಾಕಿಸ್ತಾನ ಮತ್ತು ಚೀನಾ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡುವಂತೆ ಶಿವಸೇನಾ ನಾಯಕ ಸಂಜಯ್ ರಾವತ್ ಕೇಂದ್ರಕ್ಕೆ ಸವಾಲು ಹಾಕಿದ್ದಾರೆ. ಅಷ್ಟಕ್ಕೂ ಸರ್ಜಿಕಲ್ ಸ್ಟ್ರೈಕ್ ದಾಳಿ ಪ್ರಸ್ತಾಪಕ್ಕೆ ಕಾರಣ ಕೇಂದ್ರ ಸಚಿವ ರಾವ್‌ಸಾಹೇಬ್ ದಾನ್ವೆ. ಹೌದು, ಕೃಷಿ ಮಸೂದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ರಾವ್‌ಸಾಹೇಬ್ ದಾನ್ವೆ ನೀಡಿದ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಕೇಂದ್ರದ 3 ಕೃಷಿ ಮಸೂದೆಗಳನ್ನು ಹಿಂಪಡೆಯುಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆ ಹಿಂದೆ ಪಾಕಿಸ್ತಾನ ಹಾಗೂ ಚೀನಾ ಕೈವಾಡವಿದೆ ಎಂದು ರಾವ್‌ಸಾಹೇಬ್ ಹೇಳಿದ್ದರು. ಇದು ಭಾರಿ ವಿವಾದಕ್ಕೆ ಕಾರಣವಾಗಿದೆ. ಕೇಂದ್ರ ಸಚಿವರಿಗೆ ಪಾಕಿಸ್ತಾನ ಹಾಗೂ ಚೀನಾ ನೆರವಿನ ಕುರಿತ ಮಾಹಿತಿ ಇದ್ದರೆ, ತಕ್ಷಣವೇ ಪಾಕ್-ಚೀನಾ ಮೇಲೆ ಸರ್ಜಿಕಲ್ ದಾಳಿ ನಡೆಸಿ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ವ್ಯಂಗ್ಯವಾಡಿದ್ದಾರೆ.

ಭಾರತದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂದೆ ಪಾಕಿಸ್ತಾನ ಹಾಗೂ ಚೀನಾ ಕೈವಾಡವಿದೆ ಎಂದರೆ ಗಂಭೀರ ವಿಚಾರ. ಇದರಲ್ಲಿ ದೇಶದ ಭದ್ರತೆ ಕೂಡ ಅಡಗಿದೆ. ಇಷ್ಟೇಲ್ಲಾ ಮಾಹಿತಿ ಕೇಂದ್ರಕ್ಕಿದ್ದರೆ, ರಕ್ಷಣಾ ಸಚಿವರು, ಗೃಹ ಮಂತ್ರಿ ಹಾಗೂ ಪ್ರಧಾನ ಮಂತ್ರಿ ಸರ್ಜಿಕಲ್ ದಾಳಿ ಸಂಘಟಿಸುವುದು ಅತ್ಯಗತ್ಯವಾಗಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ರಾವ್‌ಸಾಹೇಬ್ ದಾನ್ವೆ ಹೇಳಿಕೆಗೆ ದೇಶದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ರೈತರನ್ನು ದೇಶವಿರೋಧಿಗಳೆಂದು ಬಿಂಬಿಸಬೇಡಿ. ಅವರ ಹಕ್ಕಿಹಾಗಿ ಹೋರಾಟ ಮಾಡುತ್ತಿದ್ದಾರೆ. ದೇಶ ವಿರೋಧಿಗಳ ರೀತಿ ನೋಡಬೇಡಿ ಎಂದು ಆಕ್ರೋಶ ವ್ಯಕ್ತವಾಗಿದೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/