ಗೋಹ’ತ್ಯೆ ನಿಷೇಧಿಸಲು ಹೊರಟ ಮೋದಿ ಮೇಲೆಯೇ ಗೋ ಮಾಂಸ ರಫ್ತಿನ ಆರೋಪ ಹೊರಿಸಿದ ಸಿದ್ದು!ಬೆಂಗಳೂರು: ಗೋಹ’ತ್ಯೆ ನಿಷೇಧ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಯ್ದೆಯ ಸಾಧಕ ಬಾದಕಗಳ ಬಗ್ಗೆ ಚರ್ಚೆ ನಡೆಸದೇ ಏಕಾಏಕಿ ಜಾರಿಗೆ ತಂದಿರುವುದು ಸರಿಯಲ್ಲ. ಗೋಹ’ತ್ಯೆ ನಿಷೇಧ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಆದರೆ, ಗೋ ಮಾಂಸ ರಫ್ತಿನ ಬಗ್ಗೆ ನಿಷೇಧ ಹೇರಿಲ್ಲ ಎಂದು ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಗೋಹ’ತ್ಯೆ ನಿಷೇಧವನ್ನು ದೇಶಾದ್ಯಂತ ಜಾರಿಗೆ ತರಲು ಸಾಧ್ಯವಿಲ್ಲ ಅಂದ ಮೇಲೆ ಕರ್ನಾಟಕದಲ್ಲಿ ಮಾತ್ರ ಯಾಕೆ ಜಾರಿಗೆ ತರಬೇಕು? ಕೇರಳ, ಗೋವಾ, ಈಶಾನ್ಯ ರಾಜ್ಯಗಳಲ್ಲಿ ಈ ಕಾಯ್ದೆ ಇಲ್ಲ. ದೇಶಕ್ಕೆ ಒಂದು ನೀತಿ, ಕರ್ನಾಟಕ, ಉತ್ತರಪ್ರದೇಶಕ್ಕೆ ಒಂದು ನೀತಿ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಗೋಹ’ತ್ಯೆ ನಿಷೇಧದಿಂದ ಚರ್ಮೋದ್ಯಮದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ. ವಿಧೇಯಕದ ಬಗ್ಗೆ ಸಮರ್ಪಕ ಚರ್ಚೆ ನಡೆಸದೇ ಜಾರಿಗೆ ತಂದಿರುವುದು ಸರಿಯಲ್ಲ ಎಂದರು. ಇದೇ ವೇಳೆ ದೇಶದಲ್ಲಿ ಗೋ ಶಾಲೆಗಳನ್ನು ಆರಂಭಿಸುತ್ತೇವೆ. ಗೋಹ’ತ್ಯೆ ನಿಷೇಧಿಸುತ್ತೇವೆ ಎಂದು ಹೇಳುವ ಬಿಜೆಪಿ ನಾಯಕರಲ್ಲಿ ಬಹುತೇಕರು ಗೋ ಮಾಂಸ ರಫ್ತು ಮಾಡುವವರೇ ಇದ್ದಾರೆ. ಮೋದಿಯವರು ಪ್ರಧಾನಿಯಾದ ಮೇಲೆ ದೇಶದಲ್ಲಿ ಗೋ ಮಾಂಸ ರಫ್ತು ಪ್ರಮಾಣ ಹೆಚ್ಚಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ :  ದಿವಂಗತ ಉದಾಸಿಯವರ ಬಗ್ಗೆ ನಿಮಗೆಷ್ಟು ಗೊತ್ತು? ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತ ನೋಡಲೇಬೇಕು?

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/