ಸಿಎಂ ಆಪ್ತ ಆತ್ಮಹತ್ಯೆ ಕೇಸ್ ಬಗ್ಗೇ ಹೊಸ ಬಾಂಬ್ ಸಿಡಿಸಿದ ಯತ್ನಾಳ್?!ವಿಜಯಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ಅವರು ಆತ್ಮಹತ್ಯೆ ಪ್ರಯತ್ನಿಸಿದ್ದು, ನಂತರ ಬೇರೆ ಮಾತ್ರೆ ತೆಗೆದುಕೊಂಡಿರುವುದಕ್ಕೆ ಈ ರೀತಿಯಾಗಿದೆ ಎಂದು ಸಂತೋಷ್ ಹೇಳಿಕೆ ಕೊಟ್ಟಿದ್ದಾರೆ. ಆದರೆ ಈ ಕಥೆಯಲ್ಲಿ ಬಹುದೊಡ್ಡ ಸೀಕ್ರೇಟ್ ಒಂದು ಅಡಗಿದೆ ಎಂದು ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಯಡಿಯೂರಪ್ಪ ಮೊಮ್ಮಗ ಸಂತೋಷ್ ಸುಸೈಡ್ ಬಾಂಬ್‌ನ ಅಸಲಿ ಕಥೆ ಇದು ಸಂತೋಷ್ ಆತ್ಮಹತ್ಯೆ ಪ್ರಯತ್ನದ ಹಿಂದೆ ಭಾರಿ ದೊಡ್ಡ ಕಥೆಯಿದೆ. ಎಲ್ಲ ಘಟನಾವಳಿಗಳು ನನಗೆ ಗೊತ್ತಿದೆ. ಕಾಲ ಬಂದಾಗ ಎಲ್ಲವನ್ನ ನಾನು ಹೇಳುತ್ತೇನೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದರು. ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಣೆ ಮಾಡಲಿ, ಆಮೇಲೆ ಎಲ್ಲವನ್ನು ವಿಚಾರವನ್ನು ಬಹಿರಂಗ ಮಾಡುತ್ತೇನೆ ಎಂದು ಯತ್ನಾಳ್ ಗುಡುಗಿದರು.

ಯಡಿಯೂರಪ್ಪನವರ ಆಪ್ತ ವಲಯದಲ್ಲಿದ್ದ ಎನ್ಆರ್ ಸಂತೋಷ್ ಆತ್ಮಹತ್ಯೆಗೆ ಪ್ರಯತ್ನಿಸಲು ಕಾರಣವೇನು? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಸಕ್ರಿಯ ರಾಜಕಾರಣಕ್ಕೂ ಪ್ರವೇಶಿಸಲು ಬಯಸಿದ್ದ ಸಂತೋಷ್ ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಸಿಎಂ ಯಡಿಯೂರಪ್ಪನವರ ಅಕ್ಕನ ಮೊಮ್ಮಗನಾಗಿರುವ ಸಂತೋಷ್ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಸಂತೋಷ್ ಆತ್ಮಹತ್ಯೆಯ ಹಿಂದಿರುವ ಕಾರಣದ ಕುರಿತು ತನಿಖೆಯಾಗಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ. ಇದು ಬಿಜೆಪಿಯಲ್ಲಿ ಮಾತ್ರವಲ್ಲದೇ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಇದನ್ನೂ ಓದಿ :  ಆರು ತಿಂಗಳಲ್ಲಿ ಸರ್ಕಾರ ಬಿದ್ದು ಹೋಗುತ್ತೆ ಭವಿಷ್ಯ‌ ನುಡಿದ ಕೈ ಶಾಸಕ

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/