ಜಗ್ಗೇಶ್ ಗೆ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಕೊಟ್ರು ದೊಡ್ಡ ಜವಾಬ್ದಾರಿ!ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಂದ ಕೆಂಗಣ್ಣಿಗೆ ಗುರಿಯಾಗಿ ಭಾರೀ ವಿವಾದ-ಸುದ್ದಿಯಲ್ಲಿರುವ ನಟ ಜಗ್ಗೇಶ್ ಅವರನ್ನು ಬಿಜೆಪಿಯ ಬೆಂಗಳೂರು ನಗರ ಘಟಕದ ವಕ್ತಾರರಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ನಗರ ಸೇರಿದಂತೆ ಒಟ್ಟು 10 ನಗರಗಳಿಗೆ 10 ಮಂದಿಯನ್ನು ನೇಮಿಸಿ ಬಿಜೆಪಿ ಆದೇಶ ಹೊರಡಿಸಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಗ್ಗೇಶ್ ಅವರು ಬಿಜೆಪಿ ಟಿಕೆಟ್ ನಲ್ಲಿ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ನಂತರ ಹೆಚ್ಚು ಸಿನೆಮಾ ಮತ್ತು ರಿಯಾಲಿಟಿ ಶೋಗಳಲ್ಲಿ ತೊಡಗಿಸಿಕೊಂಡರು. ಇದೀಗ ಪಕ್ಷದಲ್ಲಿ ಸ್ಥಾನಮಾನ ಸಿಕ್ಕಿದೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ತಮ್ಮನ್ನು ಗುರುತಿಸಿ ಪಕ್ಷ ನೀಡಿದ ಜವಾಬ್ದಾರಿಗೆ ನಟ ಜಗ್ಗೇಶ್ ಪಕ್ಷದ ನಾಯಕರಿಗೆ ಧನ್ಯವಾದ ಹೇಳಿದ್ದಾರೆ.