ಕಳೆದ ಕೆಲವು ತಿಂಗಳುಗಳಿಂದ ಕನ್ನಡದ ಬಿಗ್ ಬಾಸ್ ನಿರೀಕ್ಷೆಯಲ್ಲಿದ್ದ ಹಲವಾರು ಜನರಿಗೆ ಇತ್ತೀಚಿಗಷ್ಟೇ ನಿಟ್ಟುಸಿರು ಬಿಡುವಂತಾಗಿತ್ತು. ಹೌದು ಹಲವು ದಿನಗಳಿಂದ ಕನ್ನಡದ ಬಿಗ್ ಬಾಸ್ ಹೊಸ ವೃತ್ತಿಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಇದೇ ತಿಂಗಳು ಅಂದರೆ ಫೆಬ್ರವರಿ 28ರಂದು ಕನ್ನಡದ ಬಿಗ್ ಬಾಸ್ ಆರಂಭವಾಗುತ್ತಿರುವುದು ಸಂತಸ ತಂದಿದೆ. ಇನ್ನು ಕನ್ನಡದ ಬಿಗ್ ಬಾಸ್ ಎಂಟನೇ ಆವೃತ್ತಿಯಲ್ಲಿ ಯಾವ ಯಾವ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂಬ ನಿರೀಕ್ಷೆ ಎಲ್ಲಾ ಅಭಿಮಾನಿಗಳಿಗೆ ಕುತೂಹಲ ಮೂಡಿಸಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಸೆಲೆಬ್ರಿಟಿಗಳು ಹೆಸರುಗಳು ಕೇಳಿಬಂದಿದ್ದವು. ಆದರೆ ಆ ಸೆಲೆಬ್ರಿಟಿಗಳು ಮೌನವಾಗಿದ್ದರಿಂದ ಅವರು ಬಿಗ್ ಬಾಸ್ ಎಂಟನೇ ಆವೃತ್ತಿಯಲ್ಲಿ ಭಾಗವಹಿಸುತ್ತಾರೆ ಎಂದು ಹಲವಾರು ಸುದ್ದಿಗಳು ಹಬ್ಬಿವೆ. ಏಕೆಂದರೆ ಬಿಗ್ ಬಾಸ್ ಮನೆಯನ್ನು ಪ್ರವೇಶಿಸದವರು ಇದೀಗಾಗಲೇ ಅದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆದರೆ ಇನ್ನು ಕೆಲವು ಸೆಲೆಬ್ರಿಟಿಗಳ ಹೆಸರುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದರೂ ಕೂಡ ಅವರು ಈ ಬಗ್ಗೆ ಮಾತನಾಡಿಲ್ಲ. ಆದ್ದರಿಂದ ಅವರು ಬಿಗ್ಬಾಸ್ ಎಂಟನೇ ಆವೃತ್ತಿಯಲ್ಲಿ ಭಾಗವಹಿಸುತ್ತಾರೆ ಎಂದು ನಂಬಲಾಗುತ್ತಿದೆ.
ಇದೀಗ ಇದೇ ರೀತಿ ಬಿಗ್ ಬಾಸ್ 8ನೇ ಆವೃತ್ತಿಯಲ್ಲಿ ಭಾಗವಹಿಸುವ ಸೆಲೆಬ್ರಿಟಿಗಳ ಮಧ್ಯೆ ಮತ್ತೊಂದು ಹೆಸರು ಕೇಳಿಬಂದಿದೆ. ಹೌದು ಕೆಲವು ಮೂಲಗಳ ಪ್ರಕಾರ ನಟ ಕಿರಣ್ ಶ್ರೀನಿವಾಸ್ ಅವರ ಹೆಸರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇನ್ನು ಕನ್ನಡದ ಬಿಗ್ ಬಾಸ್ ತಂಡ ಅವರನ್ನು ಅಪ್ರೋಚ್ ಮಾಡಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ನಟ ಕಿರಣ್ ಶ್ರೀನಿವಾಸ್ ಆಗಲಿ ಬಿಗ್ಬಾಸ್ ರಿಯಾಲಿಟಿ ಶೋ ತಂಡವಾಗಲೀ ಯಾವುದೇ ರೀತಿಯ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಒಟ್ಟಾರೆಯಾಗಿ ಕನ್ನಡ ಬಿಗ್ ಬಾಸ್ ಸ್ಪರ್ಧಿಗಳ ಹೆಸರುಗಳು ಅದು ಪ್ರಾರಂಭವಾದ ಮೇಲೆ ತಿಳಿದುಬರಲಿದೆ.
ಇದೀಗ ಕಳೆದ ವರ್ಷ ಕರುಣಾ ಕಾರಣದಿಂದಾಗಿ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ತನ್ನ 8ನೇ ಆವೃತ್ತಿಯನ್ನು ತಡವಾಗಿ ಆರಂಭಿಸುತ್ತಿದೆ. ಅಷ್ಟೇ ಅಲ್ಲದೆ ಇದೀಗಾಗಲೇ ಬಿಗ್ ಬಾಸ್ ಸ್ಪರ್ಧಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಹೊಸದಾಗಿ ಆರಂಭವಾಗುತ್ತಿರುವ ಬಿಗ್ಬಾಸ್ ರಿಯಾಲಿಟಿ ಶೋನಲ್ಲಿ ಏನೆಲ್ಲಾ ಹೊಸದನ್ನು ಕಾಣುಬಹುದು ಎಂಬುದನ್ನು ಕಾದು ನೋಡಬೇಕಾಗಿದೆ. ಇನ್ನು ಕನ್ನಡದ ಬಿಗ್ ಬಾಸ್ ತನ್ನ 8ನೇ ಆವೃತ್ತಿಯನ್ನು ಒಂದು ವಾರದಲ್ಲಿ ಪ್ರಾರಂಭಿಸಲಾಗುತ್ತದೆ. ಇನ್ನೊಂದು ವಾರ ಕಾಯ್ದರೆ ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಯಾವ ಯಾವ ಸೆಲೆಬ್ರಿಟಿಗಳು ಬರುತ್ತಾರೆ ಎಂಬುದನ್ನು ನಾವು ಕಾಣಬಹುದು. ಇನ್ನು ಈ ಸುದ್ದಿ ನಿಮಗೆ ಇಷ್ಟವಾದರೆ ಶೇರ್ ಮಾಡಿ ಹಾಗೂ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಕಮೆಂಟ್ ಮಾಡಿ ತಿಳಿಸಿ.