ಮಮತಾ ಬ್ಯಾನರ್ಜಿ ಮೇಲೆ ಅಟ್ಯಾಕ್! ಆಸ್ಪತ್ರೆಯಲ್ಲಿ ದೀದೀ!ನಂದಿಗ್ರಾಮದ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ವೇಳೆ ಸಿಎಂ ಮಮತಾ ಬ್ಯಾನರ್ಜಿ ಅವರ ಮೇಲೆ ದಾಳಿ ನಡೆದಿದ್ದು, ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಮತಾ ಬ್ಯಾನರ್ಜಿ ಅವರ ಕಾಲು ನೋವಾಗಿದ್ದು, ಪ್ಲಾಸ್ಟರ್ ಹಾಕಲಾಗಿದೆ.

ಮಮತಾ ಬ್ಯಾನರ್ಜಿ ಅವರಿಗೆ ವೈದ್ಯರು ಪ್ರಾಥಮಿಕ ಆರೋಗ್ಯ ತಪಾಸಣೆ ನಡೆಸಿ ಎಸ್‍ಎಸ್‍ಕೆಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ. ಮಮತಾ ಬ್ಯಾನರ್ಜಿ ಎದೆನೋವು ಮತ್ತು ಉಸಿರಾಟದ ತೊಂದರೆಯಾಗುತ್ತಿದೆ ಎಂದು ವೈದ್ಯರಿಗೆ ತಿಳಿಸಿರುವುದರಿಂದ ಆರೋಗ್ಯದ ಕುರಿತು ಹೆಚ್ಚಿನ ನಿಗಾವಹಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಮಮತಾ ಬ್ಯಾನರ್ಜಿಯವರು ಎಡಪಾದದ ಎಲುಬಿನಲ್ಲಿ ಸಣ್ಣ ಪ್ರಮಾಣದ ನೋವು ಕಾಣಿಸಿಕೊಂಡಿದ್ದು, ಪ್ಲಾಸ್ಟರ್ ಹಾಕಲಾಗಿದೆ. ಅದೇ ರೀತಿ ಬಲ ಭುಜ, ಕುತ್ತಿಗೆಯ ಭಾಗ, ಮತ್ತು ಎದೆನೋವು ಕಾಣಿಸಿಕೊಂಡಿರುವ ಕಾರಣ ಮುಂದಿನ 48 ಗಂಟೆಗಳ ಕಾಲ ತೀವ್ರ ನಿಗಾ ವಹಿಸಲಾಗುವುದು